Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನೇಕಲ್ ಪುರಸಭೆಗೆ ರೌಡಿಶೀಟರ್​...

ಆನೇಕಲ್ ಪುರಸಭೆಗೆ ರೌಡಿಶೀಟರ್​ ನಾಮನಿರ್ದೇಶನ; ದಿನೇಶ್ ಗುಂಡೂರಾವ್ ಕಿಡಿ

''ಮಲ್ಲೇಶ್ವರದ BJP ಕಚೇರಿ 'ಪಾಪಿಗಳ ಲೋಕ‌'ವಾಗಿದೆ''

3 Dec 2022 11:38 AM IST
share
ಆನೇಕಲ್ ಪುರಸಭೆಗೆ ರೌಡಿಶೀಟರ್​ ನಾಮನಿರ್ದೇಶನ; ದಿನೇಶ್ ಗುಂಡೂರಾವ್ ಕಿಡಿ
''ಮಲ್ಲೇಶ್ವರದ BJP ಕಚೇರಿ 'ಪಾಪಿಗಳ ಲೋಕ‌'ವಾಗಿದೆ''

ಬೆಂಗಳೂರು,ಡಿ,03: ಇತ್ತೀಚೆಗೆ ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದ ರೌಡಿ ಶೀಟರ್ ಸೈಲಂಟ್ ಸುನೀಲ್ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ಎಂಬಾತನನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.  

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ''ಆನೇಕಲ್ ಪುರಸಭೆಗೆ ರೌಡಿ ಶೀಟರ್ ಒಬ್ಬನನ್ನು ಸರ್ಕಾರ ಸದಸ್ಯನಾಗಿ ನಾಮನಿರ್ದೇಶನ ಮಾಡಿದೆ. ಈ ಸರ್ಕಾರ ರೌಡಿಗಳ‌ ಅಡ್ಡಾ ತೆರೆಯುತ್ತಿದೆಯೇ?'' ಎಂದು ಪ್ರಶ್ನೆ ಮಾಡಿದ್ದಾರೆ. 

''ಪಾತಕಿಗಳು BJP ಪಾಳಯ ಸೇರಿಕೊಳ್ಳುತ್ತಿದ್ದಾರೆ. ಶಾಂತಿಯ ನಾಡಾದ ರಾಜ್ಯದಲ್ಲಿ ರೌಡಿಗಳ ಮೂಲಕ ರಕ್ತ ರಾಜಕಾರಣ‌ ಮಾಡಲು ಮುಂದಾಗಿದೆಯೇ ಈ ಸರ್ಕಾರ?'' ಎಂದು ಕಿಡಿಕಾರಿದ್ದಾರೆ. 

'ವಾಂಟೆಡ್ ಲಿಸ್ಟ್‌ನಲ್ಲಿರೋ ರೌಡಿಗಳು ಹಾಗೂ ಪಾತಕಿಗಳು BJP ಪಡಸಾಲೆಯಲ್ಲಿ ಅಡ್ಡಾಡುತ್ತಿದ್ದಾರೆ. ಕೆಲವು ರೌಡಿಶೀಟರ್‌ಗಳನ್ನು ಸರ್ಕಾರವೇ ಆಯಕಟ್ಟಿನ ಹುದ್ದೆಗೆ ನೇಮಕ ಮಾಡುತ್ತಿದೆ. ಈ ಮೂಲಕ ಸರ್ಕಾರ ಏನು ಸಂದೇಶ ಕೊಡಲು ಹೊರಟಿದೆ? ಕರ್ನಾಟಕವನ್ನು ಗೂಂಡಾರಾಜ್ಯ ಮಾಡುವುದು BJP ನಾಯಕರ ಉದ್ದೇಶವೇ?' ಎಂದು ವಾಗ್ದಾಳಿ ನಡೆಸಿದ್ದಾರೆ. 

''ಪಾತಕಿಗಳ ಅಡ್ಡೆಯಾಗುತ್ತಿರುವ ಮಲ್ಲೇಶ್ವರದ BJP ಕಚೇರಿ 'ಪಾಪಿಗಳ ಲೋಕ‌'ವಾಗಿದೆ. ಬಾಯಲ್ಲಿ ರಾಮ ಜಪ ಮಾಡುವ BJPಯವರು ರೌಡಿಗಳ ಸಂಗ ಮಾಡಿ ಹಾಳಾಗಿ ಹೋಗಿದ್ದಾರೆ. BJPಯವರಿಗೆ ಮರ್ಯಾದೆ ಇದ್ದರೆ ಇನ್ನಾದರೂ ಆದರ್ಶ ಪುರುಷ ರಾಮನ ಹೆಸರು ಹೇಳುವುದನ್ನು ನಿಲ್ಲಿಸಲಿ. ಕರ್ನಾಟಕವನ್ನು ರೌಡಿ ರಾಜ್ಯ ಮಾಡುವುದಾಗಿ ಬಹಿರಂಗವಾಗಿ ಒಪ್ಪಿಕೊಳ್ಳಲಿ'' ಎಂದು ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ. 

ಆನೇಕಲ್ ನಿವಾಸಿ ಮಂಜುನಾಥ್ ಅಲಿಯಾಸ್ ಉಪ್ಪಿಯು ಕೊಲೆ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದು, ಮಡಿವಾಳ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆನ್ನಲಾಗಿದೆ. ಸದ್ಯ ಮಂಜುನಾಥ್ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿತ್ತಿದೆ.

[ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರತಿ]

1
ಆನೇಕಲ್ ಪುರಸಭೆಗೆ ರೌಡಿ ಶೀಟರ್ ಒಬ್ಬನನ್ನು ಸರ್ಕಾರ ಸದಸ್ಯನಾಗಿ ನಾಮನಿರ್ದೇಶನ ಮಾಡಿದೆ.

ಈ ಸರ್ಕಾರ ರೌಡಿಗಳ‌ ಅಡ್ಡಾ ತೆರೆಯುತ್ತಿದೆಯೇ?
ಮೋಸ್ಟ್ ವಾಂಟೆಡ್ ರೌಡಿಗಳು, ಪಾತಕಿಗಳು BJP ಪಾಳಯ ಸೇರಿಕೊಳ್ಳುತ್ತಿದ್ದಾರೆ.

ಶಾಂತಿಯ ನಾಡಾದ ರಾಜ್ಯದಲ್ಲಿ ರೌಡಿಗಳ ಮೂಲಕ ರಕ್ತ ರಾಜಕಾರಣ‌ ಮಾಡಲು ಮುಂದಾಗಿದೆಯೇ ಈ ಸರ್ಕಾರ? pic.twitter.com/gMk4HARC7E

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 3, 2022

2
ವಾಂಟೆಡ್ ಲಿಸ್ಟ್‌ನಲ್ಲಿರೋ ರೌಡಿಗಳು ಹಾಗೂ ಪಾತಕಿಗಳು BJP ಪಡಸಾಲೆಯಲ್ಲಿ ಅಡ್ಡಾಡುತ್ತಿದ್ದಾರೆ.

ಕೆಲವು ರೌಡಿಶೀಟರ್‌ಗಳನ್ನು ಸರ್ಕಾರವೇ ಆಯಕಟ್ಟಿನ ಹುದ್ದೆಗೆ ನೇಮಕ ಮಾಡುತ್ತಿದೆ.

ಈ ಮೂಲಕ ಸರ್ಕಾರ ಏನು ಸಂದೇಶ ಕೊಡಲು ಹೊರಟಿದೆ?

ಕರ್ನಾಟಕವನ್ನು ಗೂಂಡಾರಾಜ್ಯ ಮಾಡುವುದು BJP ನಾಯಕರ ಉದ್ದೇಶವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 3, 2022
share
Next Story
X