Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಧಾನಿ ಮೋದಿ ದೇಶದ್ರೋಹಿಗಳಿಗೆ...

ಪ್ರಧಾನಿ ಮೋದಿ ದೇಶದ್ರೋಹಿಗಳಿಗೆ ಭಸ್ಮಾಸುರ: ಸಿ.ಟಿ. ರವಿ

3 Dec 2022 12:58 PM IST
share
ಪ್ರಧಾನಿ ಮೋದಿ ದೇಶದ್ರೋಹಿಗಳಿಗೆ ಭಸ್ಮಾಸುರ: ಸಿ.ಟಿ. ರವಿ

ಬೆಂಗಳೂರು, ಡಿ.3: ಪ್ರ'ಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (C T Ravi) ಅವರು ಹೇಳಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದೀಜಿ ಅವರು ಶ್ರೀಮನ್ನಾರಾಯಣ ಎಂದು ಪ್ರಶ್ನೆಗೆ ಉತ್ತರಿಸಿದರು. ಜನರ ಪಾಲಿಗೆ ಅವರು ಕಲ್ಪವೃಕ್ಷ, ಕಾಮಧೇನು ಎಂದು ಅವರು ತಿಳಿಸಿದರು.

ದತ್ತಪೀಠದ ವಿಚಾರದಲ್ಲಿ ನಮ್ಮ ಸರಕಾರ- ನಮ್ಮ ಪಕ್ಷ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. 10 ದಿನಗಳ ಹಿಂದೆ ನ್ಯಾಯಾಲಯದ ಆದೇಶ, ಅದರ ಅನುಗುಣವಾಗಿ ಸಂಪುಟ ಉಪ ಸಮಿತಿ ತೆಗೆದುಕೊಂಡ ನಿರ್ಣಯದ ಶಿಫಾರಸುಗಳನ್ನು ಅಂಗೀಕರಿಸಿ ಸರಕಾರವು ಆಡಳಿತ ಮಂಡಳಿ ರಚಿಸಿದೆ. ಹಿಂದೂ ಅರ್ಚಕರ ನೇಮಕಕ್ಕಿದ್ದ ಅಡೆತಡೆ ಈಗ ನಿವಾರಣೆಯಾಗಿದೆ; ಹಿಂದೂ ಅರ್ಚಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಾರಿಯ ದತ್ತ ಜಯಂತಿ 4-5 ದಶಕಗಳ ಹೋರಾಟ ಈಡೇರಿದ ಸಂತೃಪ್ತಿಯ ಜಯಂತಿ ಆಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಉಪಸಮಿತಿಗೆ ಧನ್ಯವಾದಗಳು ಎಂದು ತಿಳಿಸಿದರು.

ಸರಕಾರಿ ದಾಖಲೆಗಳ ಪ್ರಕಾರ ಉಳುವವನೇ ಹೊಲದೊಡೆಯ ಮಸೂದೆಗೆ ಮುಂಚೆ ದತ್ತಾತ್ರೇಯ ದೇವರ ಹೆಸರಿನಲ್ಲಿ 1,861 ಎಕರೆ ಜಾಗ ಇತ್ತು. ಕಾಂಗ್ರೆಸ್ ಆಡಳಿತವಿದ್ದಾಗ ದತ್ತಾತ್ರೇಯ ದೇವರ ಹೆಸರಿನ ಜಮೀನನ್ನು ಗೇಣಿದಾರರೂ ಅಲ್ಲದವರಿಗೆ ಕಾಂಗ್ರೆಸ್ ಮುಖಂಡರು ಅಕ್ರಮವಾಗಿ ಮಂಜೂರು ಮಾಡಿದ್ದರೆಂದು ಮಾಹಿತಿ ಮೇಲ್ನೋಟಕ್ಕೆ ಲಭಿಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮ ಮಂಜೂರಾತಿ ರದ್ದು ಮಾಡಲು ಆಗ್ರಹಿಸುತ್ತೇನೆ ಎಂದರು.

ಕಾಂಗ್ರೆಸ್ ವಿರೋಧದ ಹಿಂದೆ ಮತೀಯ ಓಲೈಕೆ ಜೊತೆಗೇ ದತ್ತಾತ್ರೇಯ ದೇವರ ಹೆಸರಿನಲ್ಲಿದ್ದ ಆಸ್ತಿ ಹೊಡೆಯುವ ಸಂಚು ಇತ್ತು. ಮತ್ತೆ ದತ್ತಾತ್ರೇಯ ದೇವರ ಹೆಸರಿಗೆ ಜಮೀನು ಕಾಯ್ದಿರಿಸಲು ಒತ್ತಾಯ ಮಾಡುವುದಾಗಿ ತಿಳಿಸಿದರು. ಈ ಸಮಗ್ರ ತನಿಖೆಗಾಗಿ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ರಚಿಸಲು ವಿನಂತಿಸಿದರು.

ಹಿಂದೆ ಸುಪ್ರೀಂ ಕೋರ್ಟ್ ದತ್ತ ಪೀಠದ ವಿಚಾರದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ಸರಕಾರಕ್ಕೆ ವಹಿಸಿತ್ತು. ಆದರೆ, ಸಿದ್ದರಾಮಯ್ಯ ಸರಕಾರವು ಸುಪ್ರೀಂ ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿ ಇದು ಸೂಕ್ಷ್ಮ ವಿಚಾರ ಎಂದಿದ್ದರು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ನೀತಿ ಅನುಸರಿಸಿದ್ದರು. ಸತ್ಯಾಸತ್ಯತೆ ಪರಿಶೀಲಿಸದೆ ಕ್ರಮ ಕೈಗೊಂಡಿದ್ದರು. ಹಿಂದೂ ಅರ್ಚಕರ ನೇಮಕಾತಿ ತಿರಸ್ಕರಿಸಿದ ಸಿದ್ದರಾಮಯ್ಯ ಅವರದು ಯಾವ ಸೀಮೆ ಜಸ್ಟಿಸ್, ಇನ್‍ಸಾನಿಯತ್? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಸಾರ್ವಜನಿಕ ಕ್ಷಮೆ ಕೇಳಬೇಕು. ಹಿಂದೂಗಳನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುವ ಕಾಲ ಮುಗಿದಿದೆ. ನಿಮ್ಮ ಓಲೈಕೆ ನೀತಿಯ ಪರಮಾವಧಿ ಅದಾಗಿತ್ತು. ಇದಕ್ಕಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಆರ್ಥಿಕ ಬೆಳವಣಿಗೆ, ಮೂಲಸೌಕರ್ಯ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ ಎಂದ ಅವರು, ಕಾಂಗ್ರೆಸ್- ಕಮ್ಯೂನಿಸ್ಟ್ ಪಕ್ಷಗಳು ತಮ್ಮ ನೀತಿಯ ಬಗ್ಗೆ ಅವಲೋಕನ ಮಾಡಬೇಕು ಎಂದು ಕಿವಿಮಾತು ಹೇಳಿದರು.

'ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವು' :

 ಗುಜರಾತ್‍ನಲ್ಲಿ ಒಂದೂವರೆ ತಿಂಗಳ ಕಾಲ ಚುನಾವಣೆ ಕೆಲಸ ಮಾಡಿದ್ದು, ಅಲ್ಲಿ ಬಿಜೆಪಿ ಪರವಾದ ಅಲೆ ಇದೆ. ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸ್ಸಿದ್ಧ. ಹಿಮಾಚಲ ಪ್ರದೇಶದಲ್ಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸರಕಾರಾತ್ಮಕ ಬದಲಾವಣೆ, ಅಭಿವೃದ್ಧಿಯ ವೇಗದ ವಿಚಾರದಲ್ಲಿ ಕಾಂಗ್ರೆಸ್- ಕಮ್ಯೂನಿಸ್ಟ್ ಪಕ್ಷದ ಸರಕಾರಗಳು ಬಿಜೆಪಿ ಸರಕಾರಗಳಿಗೆ ಸರಿಸಾಟಿಯಲ್ಲ ಎಂದು ವಿಶ್ಲೇಷಿಸಿದರು.

ಗುಜರಾತ್ ನಲ್ಲಿ ಟೀಕಿಸುವ ಯಾವುದೇ ಸರಕಿಲ್ಲದೆ ಜನರ ಹೃದಯ ಸಾಮ್ರಾಟರಾದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾವಣ ಎಂದಿದ್ದಾರೆ. ರಾಮಮಂದಿರ ನಿರ್ಮಿಸುವವರು ರಾವಣ ಆಗುವುದು ಹೇಗೆ? ದಿನಕ್ಕೊಂದು ಬಣ್ಣ ಬದಲಿಸುವವರು, ರಾಮನನ್ನು ಕಾಲ್ಪನಿಕ ವ್ಯಕ್ತಿ ಎಂದು ಅಫಿಡವಿಟ್ ಕೊಟ್ಟ ಕಾಂಗ್ರೆಸ್ ಪಕ್ಷ ರಾವಣ ಮನಸ್ಥಿತಿ ಹೊಂದಿದೆ. ಕರಸೇವಕರ ಮೇಲೆ ಗೋಲಿಬಾರ್ ಮಾಡಿ ಹತ್ಯೆ ಮಾಡಿದವರು, ಗೋದ್ರಾ ಹತ್ಯಾಕಾಂಡ ಮಾಡಿದವರು, ಅದನ್ನು ಬೆಂಬಲಿಸಿದವರು ರಾವಣನ ಬೆಂಬಲಿಗರು ಎಂದು ಆಕ್ಷೇಪಿಸಿದರು.

2022ರ ಗುಜರಾತ್ ಫಲಿತಾಂಶ 2024ರ ಲೋಕಸಭಾ ಚುನಾವಣಾ ಫಲಿತಾಂಶದ ದಿಕ್ಸೂಚಿ ಎಂದು ವಿಶ್ಲೇಷಿಸಿದ ಅವರು, ರಾಜಕೀಯ ನಿಮಿತ್ತಂ ಬಹುಕೃತ ವೇಷಂ ಎಂಬುದು ರಾಹುಲ್ ಗಾಂಧಿ ಅವರಿಗೆ ಸರಿಹೊಂದುತ್ತದೆ. ರಾಹುಲ್ ಅವರು ಕೇಸರಿ ಶಾಲು ಧರಿಸಿದ ವೇಷದ ಬಗ್ಗೆ ಸಿದ್ದರಾಮಯ್ಯರಿಗೆ ಏನೆನಿಸುತ್ತದೆ ಎಂದು ಅಣಿಮುತ್ತು ಹೊರಡಿಸಬೇಕಿದೆ ಎಂದು ಪ್ರಶ್ನಿಸಿದರು. ರಾಹುಲ್ ಕೇಸರಿ ಶಾಲು ಧರಿಸಿದ್ದನ್ನು ಗಮನಿಸಿ ಸಿದ್ದರಾಮಯ್ಯರು ಊಸರವಳ್ಳಿ ಎನ್ನುತ್ತೀರಾ? ರಾಜಕೀಯ ನಿಮಿತ್ತಂ ಬಹುಕೃತ ವೇಷಂ ಎನ್ನುವಿರಾ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಾಕಿದವರು ಇವರ ದೃಷ್ಟಿಯಲ್ಲಿ ಸೆಕ್ಯುಲರ್‍ಗಳು. ದಾವೂದ್ ಇಬ್ರಾಹಿಂ ಕೂಡ ಇವರಿಗೆ ಸೆಕ್ಯುಲರ್ ಆದಾರು. ನಾನು ಹುಟ್ಟಿದ ಮೂಲ ಸನಾತನ ಧರ್ಮದಲ್ಲೇ ಇರುವವ ಎಂದು ನುಡಿದರು.

ಕಮ್ಯುನಲ್ ಯಾರು? ಸೆಕ್ಯುಲರ್ ಯಾರೆಂದು ಗೊತ್ತಾಗಲಿದೆ. ಆರೆಸ್ಸೆಸ್ ನಿಮಗೆ ಕಮ್ಯುನಲ್. ಬಾಂಬ್ ಹಾಕುವವರು ಸೆಕ್ಯುಲರ್ ಗಳು. ಸಮಾಜವಾದಿ ಮಜಾವಾದಿ ಆದುದನ್ನು ಇಲ್ಲಿನ ಜನತೆ ನೋಡಿದ್ದಾರೆ. ಇವರ ಜಾತ್ಯತೀತತೆ ಜನರಿಗೆ ತಿಳಿದಿದೆ. ಮಜಾವಾದಿ ಕುಟುಂಬ ವ್ಯಾಮೋಹಿ ಎಂದು ಕರೆಸಿಕೊಳ್ಳುವಷ್ಟೇ ಅರ್ಹತೆ ಇವರದು ಎಂದರು. 

ಅಹಿಂದ ಇವರಿಗೆ ಇನ್ನೊಬ್ಬರನ್ನು ಮುಗಿಸಲು ಅಸ್ತ್ರವಾಗಿದೆ. ಕಾಂಗ್ರೆಸ್ಸಿಗರ 3 ತಲೆಮಾರು, 4 ತಲೆಮಾರಿಗೆ ಆಗುವಷ್ಟು ಸಂಪತ್ತು ಮಾಡಿಕೊಂಡಿದ್ದಾರೆ ಎಂದು ಅವರದೇ ಪಕ್ಷದ ರಮೇಶ್‍ಕುಮಾರ್ ಹೇಳಿದ್ದಾರೆ. ದಲಿತ ಮುಖ್ಯಮಂತ್ರಿ ಆಗಬೇಕಿದ್ದ ಡಾ. ಪರಮೇಶ್ವರ್ ಅವರನ್ನು ಸೋಲಿಸಿದ್ದು ಎಲ್ಲರಿಗೂ ಗೊತ್ತಿದೆ. ಮೋಟಮ್ಮ ಆತ್ಮಕಥನದಲ್ಲೂ ಸಿದ್ದರಾಮಯ್ಯರ ರಾಜಕೀಯ ತಂತ್ರವನ್ನು ಬಿಡಿಸಿಟ್ಟಿದ್ದಾರೆ. ಹಿಂದೂವಾದವೇ ಕೋಮುವಾದ ಎಂದಾದರೆ ಆ ಸನಾತನ ಧರ್ಮವನ್ನು ಬೆಂಬಲಿಸುವವ ನಾನು ಎಂದು ತಿಳಿಸಿದರು.

share
Next Story
X