Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರ್ವಜನಿಕರು-ಗ್ರಾಹಕರಿಗೆ ಸೇವೆ ಒದಗಿಸುವ...

ಸಾರ್ವಜನಿಕರು-ಗ್ರಾಹಕರಿಗೆ ಸೇವೆ ಒದಗಿಸುವ ಸಂಸ್ಥೆಗಳೊಂದಿಗೆ ಪೊಲೀಸರ ಸಮನ್ವಯ ಸಭೆ

3 Dec 2022 11:16 PM IST
share
ಸಾರ್ವಜನಿಕರು-ಗ್ರಾಹಕರಿಗೆ ಸೇವೆ ಒದಗಿಸುವ ಸಂಸ್ಥೆಗಳೊಂದಿಗೆ ಪೊಲೀಸರ ಸಮನ್ವಯ ಸಭೆ

ಬೆಂಗಳೂರು, ಡಿ.3: ಸಾರ್ವಜನಿಕರಿಗೆ ಟ್ಯಾಕ್ಸಿ ಸೇವೆ ಒದಗಿಸುವ, ಆಹಾರ ಪದಾರ್ಥಗಳನ್ನು ಹಾಗೂ ಇನ್ನಿತರೆ ವಸ್ತುಗಳನ್ನು ಸರಬರಾಜು ಮಾಡುವ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ನಗರ ಪೊಲೀಸ್ ಆಯುಕ್ತರು, ವಿಶೇಷ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳು ಸಮಾಲೋಚನೆ ಹಾಗೂ ಸಮನ್ವಯ ಸಭೆ ನಡೆಸಿ ಸುರಕ್ಷತೆ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.

ಶನಿವಾರ ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ಟ್ಯಾಕ್ಸಿ ಎಜೆನ್ಸಿಗಳು, ಲಾಜಿಸ್ಟಿಕ್ ಎಜೆನ್ಸಿಗಳು, ಆಹಾರ ಪದಾರ್ಥಗಳು ಹಾಗೂ ಇನ್ನಿತರೆ ವಸ್ತುಗಳನ್ನು ಗ್ರಾಹಕರ ವಿಳಾಸಗಳಿಗೆ ಸರಬರಾಜು ಮಾಡುವ ವಿವಿಧ ಹಾಗೂ ಸೇವೆಗಳನ್ನು ಒದಗಿಸುವ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ಹಾಗೂ ಸಮನ್ವಯ ಸಭೆಯನ್ನು ನಡೆಸಿ, ಸದರಿ ಸಂಸ್ಥೆಗಳ ಅಹವಾಲುಗಳನ್ನು ಪಡೆದುಕೊಂಡರು.

ಈ ಸಂಸ್ಥೆಗಳ ಕಾರ್ಯವೈಖರಿಗಳನ್ನು ಸಾರ್ವಜನಿಕ, ಮಹಿಳೆ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಹಾಗೂ ಈ ಸೇವೆಗಳನ್ನು ಹೆಚ್ಚು ಸುರಕ್ಷತೆ ಮತ್ತು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಸಲಹೆ, ಸೂಚನೆಗಳು, ಮುಂಜಾಗ್ರತಾ ಕ್ರಮಗಳು, ತಾಂತ್ರಿಕ ಸೌಲಭ್ಯ ಅಳವಡಿಸಿಕೊಳ್ಳುವಂತೆ ಸೂಚಿಸಿದರು.

ಗ್ರಾಹಕರು ಟ್ಯಾಕ್ಸಿ ಬುಕ್ ಮಾಡಿದಾಗ ಅವರು ಪ್ರಯಾಣ ಆರಂಭಿಸಿದ ಬಳಿಕ ನಿಗದಿತ ಸ್ಥಳಕ್ಕೆ, ನಿರ್ದಿಷ್ಟ ಸಮಯಕ್ಕೆ ತಲುಪಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಟ್ಯಾಕ್ಸಿ ಎಜೆನ್ಸಿಗಳು ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಸೂಚಿಸಿದ್ದರು.

ಸಂಸ್ಥೆಯ ಸಮವಸ್ತ್ರಗಳು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು, ನೌಕರರುಕೆಲಸ ಬಿಟ್ಟಾಗ ಅವರಿಗೆ ನೀಡಲಾಗಿದ್ದ ಸಂಸ್ಥೆಯ ಗುರುತಿನ ಚೀಟಿ, ಸಮವಸ್ತ್ರವನ್ನು ವಾಪಸ್ ಪಡೆಯುವಂತೆ ಸಲಹೆ ನೀಡಿದರು.

ಡಂಝೋ, ಫೋರ್ಟರ್, ಪ್ಲಿಪ್ ಕಾರ್ಟ್ ಮುಂತಾದ ಡೆಲಿವರಿ ಪ್ಲಾಟ್‍ಫಾರಂಗಳಲ್ಲಿ ನಿಷೇಧಿತ ವಸ್ತುಗಳನ್ನು ಸರಬರಾಜು ಮಾಡದಂತೆ ಎಚ್ಚರವಹಿಸಬೇಕು. ಗ್ರಾಹಕರು ಬುಕ್ ಮಾಡಿರುವ ವಸ್ತುಗಳನ್ನು ಮಾತ್ರವೇ ಡೆಲಿವರಿ ಮಾಡತಕ್ಕದ್ದು. ತಮ್ಮ ತಮ್ಮ ಸಂಸ್ಥೆಯ ನೌಕರರಿಗೆ ಜಾಗೃತಿ ಉಂಟು ಮಾಡಲು ಅಗತ್ಯವಿದ್ದಲ್ಲಿ ಉಚಿತವಾಗಿ ಸಂಚಾರ ಪೊಲೀಸ್ ವತಿಯಿಂದ ತರಬೇತಿ ಕಾರ್ಯಗಳನ್ನು ಏರ್ಪಡಿಸುವುದಾಗಿ ಇದೇ ವೇಳೆ ತಿಳಿಸಲಾಯಿತು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾರಿಗೆ ಸೇವೆ, ಸರಕು ಸಾಗಾಣಿಕೆ,ಆಹಾರ ಸಾಗಾಣಿಕ ಕಂಪನಿಗಳು & ಮುಂತಾದ ಡೆಲಿವರಿ ಪ್ಲಾಟ್ ಫಾರಂ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಮಾನ್ಯ ಪೊಲೀಸ್ ಆಯುಕ್ತರು, ಸಂಚಾರ ವಿಶೇಷ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳು ಸಮಾಲೋಚನಾ ಸಭೆಯನ್ನು ನಡೆಸಿದರು

(1/2) pic.twitter.com/KnhvdCdD5O

— ಬೆಂಗಳೂರು ನಗರ ಪೊಲೀಸ್‌ BengaluruCityPolice (@BlrCityPolice) December 2, 2022
share
Next Story
X