ಕುದ್ಕೋರಿಗುಡ್ಡ: ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು, ಡಿ.4: ಮಂಗಳೂರು ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನ ಕುದ್ಕೋರಿಗುಡ್ಡೆ ಕಾಲನಿ ಬಳಿ 75 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಬಳಿಕ ಪ್ರತಿಯೊಂದು ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದೆ. ನಗರದ ಅಭಿವೃದ್ಧಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸುವ ಮೂಲಕ ರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.
ಈ ಸಂದರ್ಭ ಕಾರ್ಪೊರೇಟರ್ ಕಾವ್ಯಾ ನಟರಾಜ್ ಆಳ್ವ, ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ನವೀನ್ ಶೆಣೈ, ಯೋಗೀಶ್ ಶೆಣೈ, ನಾಗೇಶ್ ಕುದ್ಕೋರಿಗುಡ್ಡೆ, ರಾಧಾಕೃಷ್ಣ ಕುದ್ಕೋರಿಗುಡ್ಡೆ, ಮಹಾಬಲ ಸಾಲ್ಯಾನ್, ಚೇತನ್, ಪ್ರಕಾಶ್, ವಿವೇಕ್, ವಸಂತಿ, ಯಶೋಧಾ, ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.