ಬೆಂಗಳೂರು: ಕಲ್ಲಿನಿಂದ ಹಲ್ಲೆ ನಡೆಸಿ ವ್ಯಕ್ತಿಯ ಕೊಲೆ
ಬೆಂಗಳೂರು (Bengaluru), ಡಿ.4: ಮೂವತ್ತು ವರ್ಷದ ವ್ಯಕ್ತಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿರುವ ಘಟನೆ ಇಲ್ಲಿನ ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಪಿ ಅಗ್ರಹಾರದ ಹೇಮಂತ್ ಮೆಡಿಕಲ್ ಶಾಪ್ ಬಳಿ ಕಳೆದ ರಾತ್ರಿ ಸುಮಾರಿಗೆ ಈ ಕೊಲೆ ನಡೆದಿದೆ. ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಕೃತ್ಯದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದ್ದು, ಪರಿಚಯಸ್ಥರಿಂದ ಹತ್ಯೆ ನಡೆದಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಸಿಕ್ಕಿದೆ.
ಘಟನೆ ಸಂಬಂಧ ಶ್ವಾನದಳ ಸಿಬ್ಬಂದಿ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಹೇಳಿದ್ದಾರೆ.
Next Story