Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೆಇ ಲಸಿಕೀಕರಣ ಸುರಕ್ಷಿತ: ದ.ಕ....

ಜೆಇ ಲಸಿಕೀಕರಣ ಸುರಕ್ಷಿತ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

5 Dec 2022 7:22 PM IST
share
ಜೆಇ ಲಸಿಕೀಕರಣ ಸುರಕ್ಷಿತ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು, ಡಿ.5: ಮೆದುಳು ಜ್ವರ ತಡೆಗಟ್ಟಲು ಡಿ.25ರ ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ಲಸಿಕೀಕರಣವು ಅತ್ಯಂತ ಸುರಕ್ಷಿತ, ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ ಎಂದು  ದ.ಕ.  ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದ್ದಾರೆ.

ಅವರು ಇಂದು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ವಿವಿಧ ಇಲಾಖೆಗಳು ಹಾಗೂ  ಲೇಡಿಹಿಲ್‌ನ ಸಂತ ಅಲೋಶಿಯಸ್ ಶಾಲೆಯ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೆಇ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

2006ರಲ್ಲಿ ಈ ಲಸಿಕೆಯನ್ನು ಸಂಶೋಧಿಸಲಾಗಿದ್ದು, ಅತ್ಯಂತ ಸುರಕ್ಷಿತವಾಗಿದೆ ಅದನ್ನು ಪಡೆಯದೆ ಇದ್ದಲ್ಲೀ ಶೇ.30ರಷ್ಟು ಗಂಭೀರ ಖಾಯಿಲೆಗಳು ಬರುವ ಸಾಧ್ಯತೆಗಳಿವೆ. ಯಾವುದೇ ಅನುಮಾನಗಳಿಗೆ ಆಸ್ಪದ ನೀಡದೇ ಮುಂದಿನ ಮೂರು ವಾರಗಳಲ್ಲಿ ನಡೆಯುವ ಅಭಿಯಾನದಲ್ಲಿ ಲಸಿಕೆ ಪಡೆಯಬೇಕು. ಅದಕ್ಕಾಗಿ ಆರೋಗ್ಯ ಇಲಾಖೆಯಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್  ಮಾತನಾಡಿ, ಕೊರೋನ ನಂತರ ಈ ಲಸಿಕೆ ನೀಡಲಾಗುತ್ತಿದೆ. ಪೋಷಕರು ಯಾವುದೇ ರೀತಿಯ ತಪ್ಪುಕಲ್ಪನೆ, ಗ್ರಹಿಕೆಗಳಿಗೆ ಅವಕಾಶ ನೀಡದೇ ಪ್ರತಿಯೊಂದು ಅರ್ಹ ಮಗುವಿಗೂ ಲಸಿಕೆ ಕೊಡಿಸಬೇಕು. ಆರೋಗ್ಯ ಕೇಂದ್ರಗಳಿಗಿಂತ ಶಾಲೆಗಳಲ್ಲಿಯೇ ಲಸಿಕೆ ನೀಡಿದರೆ ಉತ್ತಮ ಎಂದರು.

ಈ ಅಭಿಯಾನಕ್ಕೆ ಜಿಲ್ಲೆಯಲ್ಲಿ 3500 ಕೇಂದ್ರಗಳನ್ನು ರಚಿಸಲಾಗಿದ್ದು, 4.73 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದರು.

ಸೇಂಟ್ ಅಲೋಶಿಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಡಾ. ಪ್ರೆಸಿಲ್ಲ ಡಿಸೋಜಾ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಮಾತನಾಡಿದರು.

ಡಬ್ಲ್ಯೂಎಚ್‌ಓ ಸರ್ವೆಲೆನ್ಸ್ ಅಧಿಕಾರಿ ಅನಂತೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್ ಬಿ.ವಿ., ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಹಾಗೂ ಇತರರು ಭಾಗವಹಿಸಿದ್ದರು.‌

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಸ್ವಾಗತಿಸಿ, ನಿರೂಪಿಸಿದರು.

share
Next Story
X