Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತದಾರರ ಗುರುತಿನ ಚೀಟಿ‌ ಅನಧಿಕೃತ ವಿತರಣೆ...

ಮತದಾರರ ಗುರುತಿನ ಚೀಟಿ‌ ಅನಧಿಕೃತ ವಿತರಣೆ ಆರೋಪ: ಪುತ್ತೂರು ಜನಸೇವಾ ಕೇಂದ್ರದ ಮೇಲೆ ಅಧಿಕಾರಿಗಳ ತಂಡ ದಾಳಿ

5 Dec 2022 10:50 PM IST
share
ಮತದಾರರ ಗುರುತಿನ ಚೀಟಿ‌ ಅನಧಿಕೃತ ವಿತರಣೆ ಆರೋಪ: ಪುತ್ತೂರು ಜನಸೇವಾ ಕೇಂದ್ರದ ಮೇಲೆ ಅಧಿಕಾರಿಗಳ ತಂಡ ದಾಳಿ

ಪುತ್ತೂರು:  ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ‌ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಕಚೇರಿಗೆ ಬೀಗ ಹಾಕಿದ ಘಟನೆ ಸೋಮವಾರ ನಡೆದಿದೆ.

ಪುತ್ತೂರು ಸಹಾಯಕ ಆಯುಕ್ತರಾದ  ಗಿರೀಶ್ ನಂದನ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದ ಮೇಲೆ ದಾಳಿ ಮಾಡಿದೆ. ತಹಶೀಲ್ದಾರ್ ನಿಸರ್ಗ ಪ್ರಿಯ ಮತ್ತು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು. ಪೊಲೀಸ್ ಬಂದೋಬಸ್ತ್ ನಲ್ಲಿ ತನಿಖೆ ನಡೆಸಲಾಯಿತು.

ಪುತ್ತೂರಿನ ವ್ಯಕ್ತಿಯೊಬ್ಬರ ಮತದಾನದ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು  ಜನ ಸೇವಾ ಕೇಂದ್ರಕ್ಕೆ ಬಂದು ವಿಷಯ ತಿಳಿಸಿದ್ದರು. ಓಟರ್ ಐಡಿ ಮತ್ತೆ ದೊರಕಿಸುವ ಸಂಬಂಧ ಆನ್ ಲೈನ್ ಅರ್ಜಿ ಪ್ರಕ್ರಿಯೆ ನಡೆಸಿ ಕೇಂದ್ರದಲ್ಲೇ ಗುರುತಿನ ಚೀಟಿ ಮುದ್ರಿಸಿ ಕೊಡಲಾಗಿದೆ ಎಂದು ಆಪಾದಿಸಲಾಗಿದೆ.

ಗುರುತಿನ ಚೀಟಿಯ ಮೇಲೆ ಅನುಮಾನ ಬಂದ ಕಾರಣ ಅವರು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ ತೆರಳಿ ತೋರಿಸಿದರು ಎನ್ನಲಾಗಿದೆ. ಅಧಿಕಾರಿಗಳು ತಪಾಸಣೆ ನಡೆಸಿದಾಗ ಹೊರಗಿನ‌ ಕೇಂದ್ರದಲ್ಲಿ ಓಟರ್ ಐಡಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿ ತನಿಖೆ ಮಾಡಿದೆ.

ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಅಪರಾಧ ಮಾಡಿರುವುದು ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು  ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ.

ಬಾಹ್ಯ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿ ವಿತರಣೆ ಮಾಡುವ ಅಧಿಕಾರವನ್ನು ನಾವು ಯಾರಿಗೂ ಕೊಟ್ಟಿಲ್ಲ. ಆದರೂ ಈ ಕೇಂದ್ರದಲ್ಲಿ ಗುರುತಿನ ಚೀಟಿ ನೀಡಿರುವುದು ಬೆಳಕಿಗೆ ಬಂದಿದೆ. ಕಾಡ್೯ ವಶಪಡಿಸಿಕೊಂಡು ಕೇಂದ್ರಕ್ಕೆ ಬೀಗ ಹಾಕಿದ್ದೇವೆ. ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ‌ ಆಯುಕ್ತರು ತಿಳಿಸಿದ್ದಾರೆ.

ನಾವು ಏನೂ ತಪ್ಪು ಮಾಡಿಲ್ಲ. ನಮ್ಮ ಜನಸೇವಾ ಕೇಂದ್ರದಲ್ಲಿ ನಿರ್ದಿಷ್ಟ ವೆಬ್ ಸೈಟ್ ತೆರೆದುಕೊಂಡ ಕಾರಣ ನಮ್ಮ ಸಿಬ್ಬಂದಿ ಲಾಗಿನ್ ಆಗಿ ಅರ್ಜಿ ಪ್ರಕ್ರಿಯೆ ನಡೆಸಿ ಕಾಡ್೯ ಮುದ್ರಿಸಿ ಕೊಟ್ಟಿದ್ದಾರೆ. ಇದರ ಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಗೆ ಪ್ರಾಯೋಗಿಕವಾಗಿ ಮಾಡಿ ತೋರಿಸಿದ್ದೇವೆ. ಇದರಲ್ಲಿ ನಮ್ಮ ತಪ್ಪೇನೂ ಇಲ್ಲ. ಸರಕಾರಿ ಅಧಿಕಾರಿಗಳ, ಚುನಾವಣಾ ಆಯೋಗದ ಅಧಿಕಾರಿಗಳ‌ ಸಹಿ ಫೋರ್ಜರಿ ಮಾಡಲು ನಮಗೆ ಸಾಧ್ಯವೇ? ನಾವು ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿಲ್ಲ ಎಂದು ಕೇಂದ್ರದ ಮಾಲಕಿ ಈ ಸಂದರ್ಭ ತಿಳಿಸಿದರು.

share
Next Story
X