ಮಂಗಳೂರು: ಇಂಡಿಯಾನ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಯಾಥ್ ಲ್ಯಾಬ್ ಉದ್ಘಾಟನೆ

ಮಂಗಳೂರು, ಡಿ.5: ನಗರದ ಪಂಪ್‌ವೆಲ್‌ನಲ್ಲಿರುವ ಇಂಡಿಯಾನ ಆಸ್ಪತ್ರೆ ಮತ್ತು ಹಾರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳ ಸಾಧನಗಳ ಸಹಿತ ಕ್ಯಾಥ್ ಲ್ಯಾಬ್ ಉದ್ಘಾಟನೆ ಕಾರ್ಯಕ್ರಮ ಸೋಮವಾರ ಜರುಗಿತು.
ದ.ಕ. ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿಕುಮಾರ್ ನೂತನ ಕ್ಯಾಥ್ ಲ್ಯಾಬ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂಡಿಯಾನ ಆಸ್ಪತ್ರೆಯಲ್ಲಿ ಇವತ್ತು ಲೋಕಾರ್ಪಣೆಗೊಂಡ ಅತ್ಯಾಧುನಿಕ ಕ್ಯಾಥ್ ಲ್ಯಾಬ್ ಇನ್ನಷ್ಟು ರೋಗಿಗಳಿಗೆ ಸಹಕಾರಿಯಾಗಲಿದೆ. ಈ ರೀತಿಯ ಆಧುನಿಕ ತಂತ್ರಜ್ಞಾನಗಳನ್ನೊಳಗೊಂಡ ಆಸ್ಪತ್ರೆಗಳಿಗೆ ಜಿಲ್ಲಾಡಳಿತ ಮತ್ತಷ್ಟು ಉತ್ತೇಜನ ನೀಡಲಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್ ಕುಮಾರ್, ಇಂಡಿಯಾನ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಯೂಸುಫ್ ಕುಂಬ್ಳೆ, ಅಧ್ಯಕ್ಷ ಡಾ.ಅಲಿ ಕುಂಬ್ಳೆ, ಜನರಲ್ ಫಿಸಿಶಿಯನ್ ಡಾ.ಆದಿತ್ಯ ಭಾರದ್ವಾಜ್ ಉಪಸ್ಥಿತರಿದ್ದರು. ಡಯಾಟಿಶಿಯನ್ ಸಾಕ್ಷಾ ಕಾರ್ಯಕ್ರಮ ನಿರೂಪಿಸಿದರು.