Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2015ರಲ್ಲಿ 'ಕೊಲೆಗೀಡಾಗಿದ್ದ' ಯುವತಿ...

2015ರಲ್ಲಿ 'ಕೊಲೆಗೀಡಾಗಿದ್ದ' ಯುವತಿ 'ಜೀವಂತವಾಗಿ ಪತ್ತೆ': ಡಿಎನ್ಎ ಪರೀಕ್ಷೆಗೆ ಸಜ್ಜಾದ ಪೊಲೀಸರು!

6 Dec 2022 5:21 PM IST
share
2015ರಲ್ಲಿ ಕೊಲೆಗೀಡಾಗಿದ್ದ ಯುವತಿ ಜೀವಂತವಾಗಿ ಪತ್ತೆ: ಡಿಎನ್ಎ ಪರೀಕ್ಷೆಗೆ ಸಜ್ಜಾದ ಪೊಲೀಸರು!

ಲಕ್ನೊ: 2015ರಲ್ಲೇ ಅಪಹರಣಗೊಂಡು ಕೊಲೆಗೀಡಾಗಿದ್ದಳೆಂದು ಹೇಳಲಾಗಿದ್ದ ಯುವತಿಯೊಬ್ಬಳು ಇನ್ನೂ ಜೀವಂತವಿದ್ದು, ಹತ್ರಾಸ್ ನಲ್ಲಿ (Hathras) ತನ್ನ ಕುಟುಂಬದ ಸದಸ್ಯರೊಂದಿಗೆ ವಾಸಿಸುತ್ತಿರುವ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪೊಲೀಸರು ಆ ಪ್ರಕರಣದ ಮರು ತನಿಖೆ ಕೈಗೊಂಡಿದ್ದಾರೆ. ಈ ನಡುವೆ ಅತ್ಯಾಚಾರ ಮತ್ತು ಕೊಲೆ ಆರೋಪಿ ಜೈಲಿನಲ್ಲಿದ್ದಾನೆ ಎಂದು indianexpress.com ವರದಿ ಮಾಡಿದೆ.

ಶನಿವಾರ ಆಲಿಗಢ್ ನ (Aligarh) ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿರುವ ಆರೋಪಿಯ ಕುಟುಂಬದ ಸದಸ್ಯರು, ಕೊಲೆಗೀಡಾಗಿದ್ದಾಳೆಂದು ಹೇಳಲಾಗಿರುವ ಯುವತಿ ಇನ್ನೂ ಜೀವಂತವಿದ್ದು, ತನ್ನ ಕುಟುಂಬದ ಸದಸ್ಯರೊಂದಿಗೆ ಹತ್ರಾಸ್ ನಲ್ಲಿ ವಾಸಿಸುತ್ತಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. ಯುವತಿಯು ಕಾಣೆಯಾದಾಗ 14 ವರ್ಷ ವಯಸ್ಸಿನ ಬಾಲಕಿಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಆಧರಿಸಿ ಹತ್ರಾಸ್ ಗೆ ಧಾವಿಸಿದ ಪೊಲೀಸರು, ಆಕೆಯಿಂದ ಹೇಳಿಕೆ ಪಡೆಯಲು ಆಲಿಗಢ್ ಗೆ ಕರೆ ತಂದಿದ್ದಾರೆ. ಆಕೆಗೀಗ 21 ವರ್ಷ ವಯಸ್ಸಾಗಿದೆ.

“ಯುವತಿಯನ್ನು ಸೋಮವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಇದರ ಬೆನ್ನಿಗೆ ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ. ಆಕೆಯ ಗುರುತನ್ನು ಖಚಿತಪಡಿಸಿಕೊಳ್ಳಲು ಡಿಎನ್ಎ ಪರೀಕ್ಷೆ ನಡೆಸುವ ಕುರಿತು ಯೋಚಿಸಲಾಗುತ್ತಿದೆ” ಎಂದು ಆಲಿಗಢ್ ನ ಇನ್ಸ್ ಪೆಕ್ಟರ್ ರಾಘವೇಂದ್ರ ಸಿಂಗ್ ತಿಳಿಸಿದ್ದಾರೆ. “ಒಂದು ವೇಳೆ ಡಿಎನ್ಎ ಪರೀಕ್ಷೆ ವರದಿಯಲ್ಲಿ ಆಕೆಯ ಗುರುತು ಖಾತರಿಗೊಂಡರೆ, ಆರೋಪಿಯ ವಿರುದ್ಧದ ಆರೋಪವನ್ನು ಕೈಬಿಡುವಂತೆ ನ್ಯಾಯಾಲಯಕ್ಕೆ ಪೊಲೀಸರು ಅರ್ಜಿ ಸಲ್ಲಿಸಲಿದ್ದಾರೆ” ಎಂದೂ ಹೇಳಿದ್ದಾರೆ.

ಯುವತಿಯ ಹೇಳಿಕೆ ದಾಖಲಿಸಿಕೊಂಡ ನಂತರ ಆಕೆಯನ್ನು ಆಲಿಗಢ್ ನ ರಕ್ಷಣಾ ನಿವಾಸವೊಂದಕ್ಕೆ ಕಳಿಸಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

“ಫೆಬ್ರವರಿ 2015ರಲ್ಲಿ 14 ವರ್ಷದ ಬಾಲಕಿಯಾಗಿದ್ದ ಯುವತಿಯು ಕಾಣೆಯಾಗಿದ್ದಳು. ಈ ಸಂಬಂಧ ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೆಲ ದಿನಗಳ ನಂತರ ಆಗ್ರಾದಲ್ಲಿ ಪತ್ತೆಯಾಗಿದ್ದ ಬಾಲಕಿಯೋರ್ವಳ ಮೃತದೇಹವನ್ನು ಗುರುತು ಹಚ್ಚಿದ್ದ ಆಕೆಯ ತಂದೆ, ಮೃತದೇಹ ತನ್ನ ಪುತ್ರಿಯದ್ದೇ ಎಂದು ಪೊಲೀಸರಿಗೆ ತಿಳಿಸಿದ್ದರು. ಇದಾದ ನಂತರ ಬಾಲಕಿಯ ನೆರಮನೆಯಲ್ಲಿದ್ದ ಯುವಕನ ವಿರುದ್ಧ ಅಪಹರಣ ಮತ್ತು ಕೊಲೆ ಆರೋಪದಡಿ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿತ್ತು. ಆತನ ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣವನ್ನೂ ದಾಖಲಿಸಿಕೊಂಡು, ಆತನನ್ನು ಬಂಧಿಸಿ ಜೈಲಿಗೆ ಕಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ ಎಂದು indianexpress.com ವರದಿ ಮಾಡಿದೆ. 

ಇದನ್ನೂ ಓದಿ: ಕೇರಳ ರಾಜ್ಯದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ವಿತ್ತ ಸಚಿವ ಕೆ. ಎನ್‌. ಬಾಲಗೋಪಾಲ್‌

share
Next Story
X