Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬಿದ್ದು ಸಿಕ್ಕಿದ ನೋಟಿನ ಬಂಡಲ್...

ಮಂಗಳೂರು: ಬಿದ್ದು ಸಿಕ್ಕಿದ ನೋಟಿನ ಬಂಡಲ್ ಪ್ರಕರಣ; ಮತ್ತೆ 2,99,500 ರೂ. ಪೊಲೀಸರ ವಶ

ಹಣದ ವಾರಿಸುದಾರರಿದ್ದರೆ ಬಂದು ಪಡೆದುಕೊಳ್ಳಿ: ಕಮಿಷನರ್‌ ಶಶಿಕುಮಾರ್

7 Dec 2022 4:54 PM IST
share
ಮಂಗಳೂರು: ಬಿದ್ದು ಸಿಕ್ಕಿದ ನೋಟಿನ ಬಂಡಲ್ ಪ್ರಕರಣ; ಮತ್ತೆ 2,99,500 ರೂ. ಪೊಲೀಸರ ವಶ
ಹಣದ ವಾರಿಸುದಾರರಿದ್ದರೆ ಬಂದು ಪಡೆದುಕೊಳ್ಳಿ: ಕಮಿಷನರ್‌ ಶಶಿಕುಮಾರ್

ಮಂಗಳೂರು, ಡಿ.7: ಪಂಪ್‌ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್  ಶಿವರಾಜ್ ಎಂಬವರಿಗೆ ಬಿದ್ದು ಸಿಕ್ಕಿದ್ದ ಹಣದ ಬಂಡಲ್‌ಗೆ ಸಂಬಂಧಿಸಿ ಮತ್ತೆ 2,99,500 ರೂ.ಗಳು ಪೊಲೀಸರ ವಶವಾಗಿದೆ. ಆದರೆ ಈವರೆಗೂ ಹಣ ಯಾರದ್ದು, ದಾರಿ ಮಧ್ಯೆ ಹೇಗೆ ಬಿದ್ದು ಸಿಕ್ಕಿತು ? ಎಂಬ ಕುತೂಹಲಕ್ಕೆ ಇನ್ನೂ ತೆರೆಬಿದ್ದಿಲ್ಲ.

ಹಣದ ಬಂಡಲ್‌ಗಳ ಪ್ರಕರಣದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಈ ಅನಾಮಧೇಯ ಹಣದ ಕಟ್ಟುಗಳ ವಾರಿಸುದಾರರು ಇದ್ದಲ್ಲಿ, ಸಂಬಂಧಪಟ್ಟ ಠಾಣೆಗೆ ಸೂಕ್ತ ಮಾಹಿತಿಯೊಂದಿಗೆ ಭೇಟಿ ನೀಡಿದರೆ ವಾಪಾಸು ನೀಡುವ ಪ್ರಕ್ರಿಯೆ ನಡೆಯಲಿದೆ ಎಂದರು.

ನ. 26ರಂದು ಶಿವರಾಜ್ ಎಂಬ ವ್ಯಕ್ತಿಗೆ ಬೆಳಗ್ಗಿನ ಹೊತ್ತು ಪಂಪ್‌ವೆಲ್ ಬಳಿ ಬಾಕ್ಸ್ ಹಾಗೂ ಪ್ಲಾಸ್ಟಿಕ್ ಚೀಲದಲ್ಲಿ ಹಣದ ಬಂಡಲ್‌ಗಳು ಸಿಕ್ಕಿತ್ತು. ಅದರಲ್ಲಿ ಎಷ್ಟು ಹಣ ಇತ್ತೆಂಬ ಬಗ್ಗೆ ಸ್ಪಷ್ಟವಾಗಿ ಆ ವ್ಯಕ್ತಿ ಹೇಳುತ್ತಿಲ್ಲ. ಮಾಧ್ಯಮದಲ್ಲಿ 10 ಲಕ್ಷ ರೂ. ಹಣದ ಕವರ್ ಸಿಕ್ಕಿರುವುದಾಗಿ ವರದಿಯಾಗಿರುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಣ ದೊರೆತಿರುವ ಪ್ರದೇಶದ ಸಿಸಿ ಕ್ಯಾಮರಾ ಕೂಡಾ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಶಿವರಾಜ್ ಹಣದ ಕಟ್ಟು ಸಿಕ್ಕಿದ ತನ್ನ ಜತೆ ಮದ್ಯಪಾನ ಮಾಡುವ ವ್ಯಕ್ತಿ ತುಕರಾಂ ಎಂಬವರಿಗೆ 500 ರೂ.ಗಳ ಆರು ಕಟ್ಟು ಹಣವನ್ನು ನೀಡಿದ್ದಾಗಿ ಹೇಳಿಕೊಂಡಿದ್ದ. ಈ ಬಗ್ಗೆ ಮಾದ್ಯಮದಲ್ಲಿ ಮಾಹಿತಿ ಬಂದ ಹಿನ್ನೆಲೆಯಲ್ಲಿ ತುಕರಾಂ ಎಂಬ ವ್ಯಕ್ತಿ 2,99,500 ರೂ.ಗಳನ್ನು ಠಾಣೆಗೆ ತಂದು ನೀಡಿದ್ದಾನೆ. ಶಿವರಾಜ್‌ನಿಂದ ಹಣದ ಕಟ್ಟುಗಳನ್ನು  ಪಡೆದಿದ್ದ ತುಕಾರಾಂ ಒಂದು ಕಟ್ಟಿನಿಂದ 500 ರೂ. ತೆಗೆದು ಮದ್ಯಪಾನ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ. ಈ ಬಗ್ಗೆ ಶಿವರಾಜ್ "ಹಣದ ಕಟ್ಟು ಹಿಡಿದುಕೊಂಡು ಮಲಗಿದ್ದೆ. ತನ್ನದಲ್ಲಿದ್ದ ಹಣದ ಒಂದು ಕಟ್ಟಿನಿಂದ ಒಂದು ನೋಟು ತೆಗೆದು ಮದ್ಯಪಾನ ಮಾಡಿ ಮಲಗಿದ್ದೆ. ಬಳಿಕ ಎಚ್ಚರವಾದಾಗ ಒಂದು ನೋಟು ತೆಗೆದ ಕಟ್ಟು ಬಿಟ್ಟು ಬೇರೆ ಯಾವುದೇ ಹಣ ಇರಲಿಲ್ಲ" ಎನ್ನುತ್ತಾನೆ. ಒಟ್ಟು ಇದೀಗ ತುಕರಾಂ ತಂದು ಕೊಟ್ಟ 2,99,500 ಮತ್ತು 49,000 ರೂ. ಪೊಲೀಸರ ವಶದಲ್ಲಿದೆ. ಅದನ್ನು ಸೂಕ್ತ ದಾಖಲೀಕರಣದೊಂದಿಗೆ ಪೊಲೀಸರ ವಶದಲ್ಲಿರಿಸಲಾಗಿದೆ. ವಾರಿಸುದಾರರು ಬಾರದಿದ್ದಲ್ಲಿ ಮುಂದಿನ ಕ್ರಮ ವಹಿಸಲಾಗುವುದು. ಈಗಾಗಲೇ ಅದರಲ್ಲಿ 10 ಲಕ್ಷ ಇತ್ತೆಂದು ಹೇಳಲಾಗಿರುವಂತೆ, ಯಾರಾದರೂ ಶಿವರಾಜ್ ಬಳಿ ಇದ್ದ ಹಣವನ್ನು ಕೊಂಡು ಹೋಗಿದ್ದಲ್ಲಿ ಅದನ್ನು ಠಾಣೆಗೆ ಒಪ್ಪಿಸಿದರೆ ಅವರ ಮೇಲೆ ಯಾವುದೇ ರೀತಿಯ ಪ್ರಕರಣ ದಾಖಲಿಸಲಾಗುವುದಿಲ್ಲ. ಒಂದು ವೇಳೆ ತನಿಖೆಯ ವೇಳೆ, ಸಿಸಿ ಕ್ಯಾಮರಾ ಫೂಟೇಜ್ ತಪಾಸಣೆಯ ಸಂದರ್ಭ ಯಾರಾದರೂ ಶಿವರಾಜ್ ಬಳಿ ಇದ್ದ ಹಣ ಕದ್ದುಕೊಂಡು ಹೋಗಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಸುಲಿಗೆ, ದರೋಡೆ ಪ್ರಕರಣ ದಾಖಲಾಗುತ್ತದೆ. ಉಳಿದಂತೆ ಶಿವರಾಜ್ ಅಥವಾ ತುಕರಾಂ ಮೇಲೆ ಯಾವುದೇ ರೀತಿಯ ಅಪರಾಧ ಪ್ರಕರಣ ದಾಖಲಿಸಲಾಗಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪೊಲೀಸ್ ಆಯಕ್ತರು ವಿವರ ನೀಡಿದರು.

ಪ್ರಕರಣ ನಡೆದು ಹಲವು ದಿನಗಳಾದರೂ ಹಣ ಯಾರಿಗೆ ಸೇರಿದ್ದು ಎಂಬ ಬಗ್ಗೆ ಪರಿಶೀಲನೆಗೆ ಸಂಬಂಧಿಸಿ ಸಿಸಿ ಕ್ಯಾಮರಾ ಪರಿಶೀಲನೆ ವಿಳಂಬ ಯಾಕೆ ಎಂಬ ಪ್ರಶ್ನೆಗೆ  ಪ್ರತಿಕ್ರಿಯಿಸಿದ, ಹಣ ಸಿಕ್ಕಿರುವುದು ಗೊತ್ತಾಗಿರುವ ದಿನ ಠಾಣಾಧಿಕಾರಿ ವ್ಯಕ್ತಿಯಿಂದ ಹೇಳಿಕೆ ಪಡೆದು ಸ್ಥಳದಲ್ಲೇ ಹಣವನ್ನು ಲೆಕ್ಕ ಮಾಡಿ ಶಿವರಾಜ್ ಬಳಿ 49500 ರೂ. ಇದ್ದಿದ್ದನ್ನು ದಾಖಲಿಸಿಕೊಂಡಿದ್ದರು. ಈ ಬಗ್ಗೆ ಯಾರೂ ವಾರಿಸುದಾರರು ಬಂದಿಲ್ಲ. ಇದೀಗ ಹಣ 10 ಲಕ್ಷ ಇತ್ತೆಂಬ ಮಾಹಿತಿ ಮಾಧ್ಯಮದಲ್ಲಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಈಗಾಗಲೇ ತುಕರಾಂ ಎಂಬ ವ್ಯಕ್ತಿಯೂ ತನ್ನದಲ್ಲಿದ್ದ ಹಣವನ್ನು ನೀಡಿದ್ದಾನೆ. ಹಾಗಾಗಿ ಉಳಿದಂತೆ ಸಿಸಿ ಕ್ಯಾಮರಾ ಸೇರಿದಂತೆ ಸೂಕ್ತ ರೀತಿಯ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗಿನ ವಿಚಾರಣೆಯಲ್ಲಿ ಸಿಬ್ಬಂದಿ, ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದಲ್ಲಿಯೂ ಶಿಸ್ತಿನ ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.

ಗೋಷ್ಠಿಯಲ್ಲಿ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ದಿನಕರ ಶೆಟ್ಟಿ ಉಪಸ್ಥಿತರಿದ್ದರು.

share
Next Story
X