ಉಡುಪಿ: ತರಬೇತಿ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲದ ಜಿಪಂ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯ ಅನುಷ್ಠಾನದಲ್ಲಿ ಭಾಗೀದಾರ ಇಲಾಖೆಗಳ ಪಾತ್ರ ಕುರಿತ ಎರಡು ದಿನಗಳ ಓರಿಯೆಂಟೇಷನ್ ತರಬೇತಿ ಕಾರ್ಯಕ್ರಮವನ್ನು ಮಂಗಳವಾರ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ ಸ್ವಾಗತಿಸಿ, ಮಹಿಳಾ ಶಕ್ತಿ ಕೇಂದ್ರದ ದೀಪಾ ನಿರೂಪಿಸಿದರು. ಶಾರದ ವಂದಿಸಿದರು.