ಧಾರವಾಡ: ನೇಣುಬಿಗಿದ ಸ್ಥಿತಿಯಲ್ಲಿ ಯುವಕ-ಯುವತಿಯ ಮೃತದೇಹ ಪತ್ತೆ
ಧಾರವಾಡ ನವಲಗುಂದ: ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕ-ಯುವತಿಯ ಮೃತದೇಹ ಪತ್ತೆಯಾಗಿದೆ.
ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಎದುರಿನ ಖಾಸಗಿ ಲಾಡ್ಜ್ನಲ್ಲಿ ಯುವಕ, ಯುವತಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಬುಧವಾರ ಸಂಜೆ ನಡೆದಿದೆ.
ಈ ಬಗ್ಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
ಮೃತ ದೇಹಗಳನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
Next Story