ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ
ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗುರುವಾರ ಬೆಳಗ್ಗೆ 10.15ಕ್ಕೆ ಪಕ್ಷದ ಎಲ್ಲ ಸಂಸದರ ಸಭೆ ಕರೆದಿದ್ದಾರೆ.
ಸಂಸತ್ ಭವನದಲ್ಲಿ ನಡೆಯುವ ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಸಂಸದರ ಜತೆ ಸೋನಿಯಾ ಗಾಂಧಿ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳ ಬಗ್ಗೆ ಸೋನಿಯಾ ಪಕ್ಷದ ಸಹೋದ್ಯೋಗಿಗಳ ಜತೆ ಚರ್ಚಿಸುವರು ಎಂದು ತಿಳಿದು ಬಂದಿದೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಳ ಫಲಿತಾಂಶ ಕೂಡಾ ಇಂದು ಪ್ರಕಟವಾಗಲಿದ್ದು, ಈ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆ ಇದೆ.
ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರೂ ಆಗಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಮುಂದುವರಿದಿದ್ದಾರೆ.
Next Story