ಚಂಡಮಾರುತದಿಂದ ಭಾರೀ ಮಳೆ ಸಾಧ್ಯತೆ: ತಮಿಳುನಾಡು, ಆಂಧ್ರಪ್ರದೇಶಕ್ಕೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಪುದುಚೇರಿ: ಬಂಗಾಳ ಕೊಲ್ಲಿಯ ನೈರುತ್ಯ ಭಾಗ ಮತ್ತು ಅದಕ್ಕೆ ಹೊಂದಿಕೊಂಡಿರುವ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬಂಗಾಳ ಕೊಲ್ಲಿಯ ನೈರುತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಆಗ್ನೇಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತವಾಗಿದ್ದು, ‘ಮ್ಯಾನ್-ಡೌಸ್ ಎಂದು ಉಚ್ಚರಿಸಲ್ಪಡುವ ಚಂಡಮಾರುತ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಉತ್ತರ ತಮಿಳು ನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶಗಳಿಗೆ ಹಳದಿ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಇದಕ್ಕೂ ಮುನ್ನ ಬಂಗಾಳ ಕೊಲ್ಲಿಯ ನೈರುತ್ಯ ಹಾಗೂ ಅದಕ್ಕೆ ಹೊಂದಿಕೊಂಡಿರುವ ಆಗ್ನೇಯ ಭಾಗದಲ್ಲಿ ಉಂಟಾಗುವ ತೀವ್ರ ವಾಯುಭಾರ ಕುಸಿತದಿಂದ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಸಾಗಿ, ಗುರುವಾರ ಮುಂಜಾನೆ ವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿತ್ತು.