Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಕರ್ನಾಟಕ ಯುವ ನೀತಿ-2022’ಕ್ಕೆ ಸಚಿವ...

‘ಕರ್ನಾಟಕ ಯುವ ನೀತಿ-2022’ಕ್ಕೆ ಸಚಿವ ಸಂಪುಟ ಅನುಮೋದನೆ

ರಾಷ್ಟ್ರೋತ್ಥಾನ ಪರಿಷತ್‍ಗೆ ಭೂಮಿ ಮಂಜೂರು ► ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅನುಷ್ಠಾನ

8 Dec 2022 7:35 PM IST
share
‘ಕರ್ನಾಟಕ ಯುವ ನೀತಿ-2022’ಕ್ಕೆ ಸಚಿವ ಸಂಪುಟ ಅನುಮೋದನೆ
ರಾಷ್ಟ್ರೋತ್ಥಾನ ಪರಿಷತ್‍ಗೆ ಭೂಮಿ ಮಂಜೂರು ► ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅನುಷ್ಠಾನ

ಬೆಂಗಳೂರು, ಡಿ.8: ರಾಜ್ಯದ ಯುವ ಜನತೆಯ ಸವಾರ್ಂಗೀಣ ಅಭಿವೃದ್ಧಿಗಾಗಿ ಸ್ಪಷ್ಟವಾದ ನೀತಿ ಮತ್ತು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನೂತನ ಯುವನೀತಿ-2022ನ್ನು ರಚಿಸಲಾಗಿದ್ದು, ಮುಂದಿನ 8 ವರ್ಷಕ್ಕೆ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು.

ಯುವ ಜನತೆಗಾಗಿ ಪ್ರತ್ಯೇಕ ಯುವ ಸಬಲೀಕರಣ ನಿರ್ದೇಶನಾಲಯ, ತಾಲೂಕು ಮಟ್ಟದಲ್ಲಿ ಕಚೇರಿಗಳು, ಯುವ ಬಜೆಟ್, ಯುವ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆ, ಮುಖ್ಯಮಂತ್ರಿ ಅಥವಾ ಸಚಿವರ ಅಧ್ಯಕ್ಷತೆಯಲ್ಲಿ ಕೋಶವೊಂದನ್ನು ರಚಿಸಿ ಕಾರ್ಯಕ್ರಮಗಳ ಮೇಲುಸ್ತುವಾರಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ನೂತನ ಯುವನೀತಿ ರೂಪಿಸಲು ಡಾ.ಆರ್.ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ 14 ಜನರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ರಾಜ್ಯಾದ್ಯಂತ ಅಧ್ಯಯನ ನಡೆಸಿ, ಸಾವಿರಾರು ಜನರ ಅಭಿಪ್ರಾಯ ಸಂಗ್ರಹಿಸಿ ಹಲವು ಶಿಫಾರಸ್ಸುಗಳನ್ನು ಒಳಗೊಂಡ ನೂತನ ಯುವನೀತಿಯನ್ನು ರಚಿಸಿ ಸರಕಾರಕ್ಕೆ ಸಲ್ಲಿಸಿದ್ದು, ಅದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮಾಧುಸ್ವಾಮಿ ತಿಳಿಸಿದರು.

20 ಕುರಿ ಹಾಗೂ ಒಂದು ಮೇಕೆ ಘಟಕಗಳನ್ನು ಅರ್ಹ 20 ಸಾವಿರ ಕುರಿಗಾಹಿಗಳಿಗೆ 1.75 ಲಕ್ಷ ರೂ.ಘಟಕ ವೆಚ್ಚ ಸೇರಿದಂತೆ ಒಟ್ಟಾರೆ 354.50 ಕೊಟಿ ರೂ.ಗಳ ವೆಚ್ಚದಲ್ಲಿ ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ಯನ್ನು ಅನುಷ್ಠಾನಗೊಳಿಸಲು ತಾತ್ವಿಕ ಆಡಳಿತಾತ್ಮಕ ಅನುಮೋದನೆ ನೀಡಿ ಅ.29ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸಿವಿಲ್ ಸೇವಾ ನೌಕರರು ಧರ್ಮ, ಜನಾಂಗ, ಪ್ರದೇಶ, ಭಾಷೆ, ಕೋಮು ಹಾಗೂ ಇತರೆ ಕಾರಣಗಳಿಂದ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ಅಸೂಯೆ ಭಾವನೆಗಳನ್ನು ಉದ್ದೀಪನಗೊಳಿಸುವ ಸಂಸ್ಥೆಗಳೊಂದಿಗೆ ಜೊತೆಗೂಡುವುದನ್ನು, ಸದಸ್ಯನಾಗುವುದನ್ನು ಪ್ರತಿಬಂಧಿಸಲು ‘ಕರ್ನಾಟಕ ಸಿವಿಲ್ ಸೇವೆಗಳು(ನಡತೆ)(1ನೆ ತಿದ್ದುಪಡಿ)ನಿಯಮಗಳು, 2022’ಕ್ಕೆ ಅನುಮೋದನೆ ನೀಡಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ರಾಜ್ಯ ಸಿವಿಲ್ ಸೇವಾ ನೌಕರರು ಪ್ರತಿ ವರ್ಷದ ಡಿಸೆಂಬರ್ ಅಂತ್ಯದ ಬದಲಾಗಿ ಮಾರ್ಚ್ ಅಂತ್ಯಕ್ಕೆ ಆಸ್ತಿ ವಿವರಗಳನ್ನು ಸಲ್ಲಿಸುವ ಕುರಿತು ‘ಕರ್ನಾಟಕ ಸಿವಿಲ್ ಸೇವೆಗಳು(ನಡತೆ)(2ನೆ ತಿದ್ದುಪಡಿ)ನಿಯಮಗಳು, 2022’ಕ್ಕೆ ಅನುಮೋದನೆ ನೀಡಲಾಗಿದೆ. ರಾಜ್ಯ ವಿದ್ಯುತ್ ನಿಗಮಕ್ಕೆ ಆರ್ಥಿಕ ವರ್ಷ 2022-23ನೆ ಸಾಲಿಗೆ ಬ್ಯಾಂಕ್‍ಗಳು, ಹಣಕಾಸು ಸಂಸ್ಥೆಗಳಿಂದ 3000 ಕೋಟಿ ರೂ.ಗಳ ಸಾಲವನ್ನು ಪಡೆಯಲು ಸರಕಾರದ ಖಾತರಿ ಒದಗಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಖಾಸಗಿ ಹೂಡಿಕೆ ಆಧಾರದ ಮೇಲೆ ಗ್ರಿಡ್ ಬೆಂಬಲಿತ 1000 ಮೆ.ವ್ಯಾ.ಪಂಪ್ಡ್ ಹೈಡ್ರೋ ಸ್ಟೋರೇಜ್ ವಿದ್ಯುತ್ ಯೋಜನೆಯನ್ನು ವಿದ್ಯುತ್ ಕಾಯ್ದೆ-2003 ಕಲಂ 63ರ ಅಡಿಯಲ್ಲಿ ಪಿಸಿಕೆಎಲ್ ಸಂಸ್ಥೆಯವರಿಂದ 4000 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಆಸ್ಪತ್ರೆಯನ್ನು 100 ರಿಂದ 250 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಕಟ್ಟಡ ನಿರ್ಮಾಣ ಕಾಮಗಾರಿಯ 26.50 ಕೋಟಿ ರೂ.ಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆಝಾದಿ ಕಾ ಅಮೃತ್ ಮಹೋತ್ಸವ್ ಆಚರಣೆಯ ಅಂಗವಾಗಿ 42 ಕೈದಿಗಳನ್ನು ಗಣರಾಜೋತ್ಸವದ ಪ್ರಯುಕ್ತ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಗೃಹ ಮಂಡಳಿಯಿಂದ ಬೆಂಗಳೂರಿನ ಸೂರ್ಯನಗರ 1ನೆ ಹಂತದ ವಾಣಿಜ್ಯ ನಿವೇಶನ ಸಂಖ್ಯೆ:1ರಲ್ಲಿ ವಾಣಿಜ್ಯ ಮಳಿಗೆ ಹಾಗೂ ಮಂಡಳಿಯ ಕಚೇರಿಗೆ ಕಟ್ಟಡವನ್ನು ನಿರ್ಮಿಸುವ 20 ಕೋಟಿ ರೂ.ಗಳ ಅಂದಾಜು ಮೊತ್ತದ ಯೋಜನೆ ಹಾಗೂ ಸೂರ್ಯನಗರ 2ನೆ ಹಂತದ ಮುಂದುವರೆದ ರಾಜಾಪುರ ಸಂಯುಕ್ತ ವಸತಿ ಯೋಜನೆಯ ಬ್ಲಾಕ್ ಎ ರಲ್ಲಿ ಹಾದು ಹೋಗಿರುವ ರಾಜಕಾಲುವೆಗಳನ್ನು 11 ಕೋಟಿ ರೂ.ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ಧಾರವಾಡ ತಾಲೂಕಿನ ಸತ್ತೂರ ಗ್ರಾಮದಲ್ಲಿ ರಾಜ್ಯ ಗೃಹ ಮಂಡಳಿಯ ವಸತಿ ಯೋಜನೆಗಾಗಿ ಭೂ ಸ್ವಾಧೀನಪಡಿಸಿರುವ 258.09 ಎಕರೆ ಜಮೀನಿನ ಪೈಕಿ 50:50ರ ಅನುಪಾತದ ಪಾಲುದಾರಿಕೆಯಡಿಯಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಭೂ ಮಾಲಕರಿಗೆ ನೀಡುವ ಬಗ್ಗೆ ಹಾಗೂ ಪ್ರತಿ ಎಕರೆಗೆ 5 ಲಕ್ಷ ರೂ.ಮುಂಗಡ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನಾರಾಯಣಪುರ ಬಲದಂಡೆ ನಾಲೆಯ ಉಪ ಕಾಲುವೆಯ ಭಾದಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಒಟ್ಟು 253.94 ಕೋಟಿ ರೂ.ಗಳ ಅಂದಾಜು ಮೊತ್ತದ 6 ಏತ ನೀರಾವರಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬೋರಬಂಡಾ ಗ್ರಾಮದ ಸ.ನಂ.151ರಲ್ಲಿ 8 ಎಕರೆ 30 ಗುಂಟೆ ಜಮೀನನ್ನು ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಂಘಕ್ಕೆ ಧಾರ್ಮಿಕ ಉದ್ದೇಶಕ್ಕಾಗಿ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

---------------------------

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ 23,251.66 ಕೋಟಿ ರೂ.ಗಳ ಪರಿಷ್ಕೃತ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಯೋಜನೆ ಆರಂಭವಾದಾಗ 15 ಸಾವಿರ ಕೋಟಿ ರೂ.ಅಂದಾಜು ಮಾಡಲಾಗಿತ್ತು.

-----------------------------------
 
ರಾಷ್ಟ್ರೋತ್ಥಾನ ಪರಿಷತ್‍ಗೆ ಭೂಮಿ ಮಂಜೂರು

ರಾಷ್ಟ್ರೋತ್ಥಾನ ಪರಿಷತ್ತಿಗೆ ಚಿಕ್ಕಮಗಳೂರು ಜಿಲ್ಲೆಯ ಹಿರೇಮಗಳೂರು ಗ್ರಾಮದ ಸ.ನಂ.544ರಲ್ಲಿ 6 ಎಕರೆ ಜಮೀನನ್ನು 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹಾಗೂ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯ ಹುಲಿಮಂಗಲ ಗ್ರಾಮದ ಸ.ನಂ.155/6ರ ಬ್ಲಾಕ್ ನಂ.ಬಿ23ರಲ್ಲಿ 1 ಎಕರೆ 36 ಗುಂಟೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಮಂಜೂರು ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. 

ಒಲಂಪಿಕ್ ಮತ್ತು ಪ್ಯಾರಾ ಒಲಿಂಪಿಕ್‍ನಲ್ಲಿ ಪದಕ ವಿಜೇತರಿಗೆ ಗ್ರೂಪ್ ಎ ವೃಂದದ ಸರಕಾರಿ ಉದ್ಯೋಗ, ಏಷ್ಯನ್ ಗೇಮ್ಸ್, ಕಾಮನ್‍ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಬಿ ಗ್ರೂಪ್ ಸರಕಾರಿ ಉದ್ಯೋಗ, ನ್ಯಾಷನಲ್ ಗೇಮ್ಸ್‍ನಲ್ಲಿ ಪದಕ ವಿಜೇತರಿಗೆ ಸಿ ಗ್ರೂಪ್ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಅದರಂತೆ ಇವತ್ತಿನ ಸಚಿವ ಸಂಪುಟ ಸಭೆಯಲ್ಲಿ ಕ್ರೀಡಾಪಟುಗಳಿಗೆ ಸರಕಾರಿ ಉದ್ಯೋಗ ನೀಡುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದರು. 

ಉಪ ವಿಭಾಗಾಧಿಕಾರಿ, ಸಹಾಯಕ ಆಯುಕ್ತರು(ಜಿಎಸ್ಟಿ) ಸೇರಿದಂತೆ 9 ಇಲಾಖೆಗಳಲ್ಲಿ ತಲಾ 5 ರಂತೆ 45 ಗ್ರೂಪ್-ಎ ಹುದ್ದೆಗಳು, ತಹಶೀಲ್ದಾರ್ ಸೇರಿದಂತೆ 15 ಇಲಾಖೆಗಳಲ್ಲಿ 150 ಗ್ರೂಪ್ ಬಿ ವೃಂದದ ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಇದರ ಜೊತೆಗೆ ಶೇ.2ರಷ್ಟು  ಸಮತಳ ಮೀಸಲಾತಿ ಜಾರಿಗೆ ತಂದರೆ ಕ್ರೀಡಾಪಟುಗಳಿಗೆ ಅತಿ ಹೆಚ್ಚಿನ ಉತ್ತೇಜನ ನೀಡಿದಂತಾಗುತ್ತದೆ ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X