ಡಿ.9: ಶಿಕ್ಷಣ ಸಚಿವರ ದ.ಕ.ಜಿಲ್ಲಾ ಪ್ರವಾಸ

ಮಂಗಳೂರು, ಡಿ.8: ಪ್ರಾಥಮಿಕ, ಪ್ರೌಢ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಡಿ.9ರಂದು ದ.ಕ.ಜಿಲ್ಲಾ ಪ್ರವಾಸ ಮಾಡಲಿದ್ದಾರೆ.
ಡಿ.9ರ ಮಧ್ಯಾಹ್ನ 2:30ಕ್ಕೆ ಮೂಡುಬಿದಿರೆಯ ಕಲ್ಲಬೆಟ್ಟುನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ನಗೆ ಹಬ್ಬ ಮತ್ತು ಯಕ್ಷವೈಭವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 6:30ಕ್ಕೆ ನಗರದ ಕೋಡಿಯಾಲ್‌ಬೈಲ್‌ನ ಓಶಿಯನ್ ಪರ್ಲ್ ಹೊಟೇಲ್‌ನಲ್ಲಿ ಕೆಯುಪಿಎಂಎ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ರಾತ್ರಿ 10:15ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.
Next Story