Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಿಪಿಸಿಯ ಷಹಜಹಾನ್ ಇಕ್ಬಾಲ್ ನೇತೃತ್ವದ...

ಪಿಪಿಸಿಯ ಷಹಜಹಾನ್ ಇಕ್ಬಾಲ್ ನೇತೃತ್ವದ ತಂಡಕ್ಕೆ ಎನ್‌ಸಿಐಸಿಪಿ-2022ರಲ್ಲಿ 2ನೇ ಸ್ಥಾನ

8 Dec 2022 8:18 PM IST
share
ಪಿಪಿಸಿಯ ಷಹಜಹಾನ್ ಇಕ್ಬಾಲ್ ನೇತೃತ್ವದ ತಂಡಕ್ಕೆ ಎನ್‌ಸಿಐಸಿಪಿ-2022ರಲ್ಲಿ 2ನೇ ಸ್ಥಾನ

ಉಡುಪಿ, ಡಿ.8: ನಗರದ ಪೂರ್ಣಪ್ರಜ್ಞ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿ ಷಹಜಹಾನ್ ಇಕ್ಬಾಲ್ ಅವರು ತನ್ನ ತಂಡದ ಪರವಾಗಿ ಪಾಟ್ನಾದ ಪಾಟಲೀಪುತ್ರ ವಿವಿಯಲ್ಲಿ ನಡೆದ ಎನ್‌ಸಿಐಸಿಪಿ-22ರಲ್ಲಿ ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿ ಎರಡನೇ ಪ್ರಶಸ್ತಿಯನ್ನು ಸ್ವೀಕರಿಸಿದರಲ್ಲದೇ, ಇದೇ ಸಂದರ್ಭದಲ್ಲಿ ಖ್ಯಾತ ವಿಜ್ಞಾನಿ ಪದ್ಮಶ್ರೀ ಎಚ್. ಸಿ.ಶರ್ಮರನ್ನು ಭೇಟಿಯಾಗುವ ಅವಕಾಶವನ್ನೂ ಪಡೆದರು.

ಪೂರ್ಣಪ್ರಜ್ಞ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿಗಳಾದ  ಷಹಜಹಾನ್ ಇಕ್ಬಾಲ್,  ಚೈತ್ರಿಕಾ ಬಿ.ಎಂ., ಮೊಹಮ್ಮದ್ ಹಾಶಿಮ್ ಮತ್ತು ಚ್ಯವನ್ ಹೆಗಡೆ ಇವರ ನ್ನೊಳಗೊಂಡ ತಂಡ, ಭಾರತೀಯ ಭೌತಶಾಸ್ತ್ರ ಶಿಕ್ಷಕರ ಸಂಘ (ಐಎಪಿಟಿ) ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಕಂಪ್ಯೂಟೇಶನಲ್ ಫಿಸಿಕ್ಸ್ ಸ್ಪರ್ಧೆ - ಎನ್‌ಸಿಐಸಿಪಿ-2022ರಲ್ಲಿ ಭಾಗವಹಿಸಿ ‘ಕಂಪ್ಯೂಟೇಷನಲ್ ಸ್ಟಡಿ ಟೆಂಪರೇಚರ್ ಡೆಪೆಂಡೆನ್ಸ್ ಆಫ್ ಎನ್‌ಕ್ಯೂಆರ್ ಫ್ರಿಕ್ವೆನ್ಸಿ ಎಂಡ್ ಇಂಟರ್ನಲ್ ಮೋಷನ್ಸ್ ಆಫ್ ಕಂಪೌಂಡ್ಸ್ ಇನ್ ಪ್ಲಾಂಟ್ ನ್ಯೂಟ್ರಿಯೆಂಟ್ಸ್ ಕಾನ್ಸ್ಟಿಟ್ಯುಯೆಂಟ್ ಆಫ್ ಹರ್ಬಿಸೈಡ್’ ಎಂಬ ಪ್ರಾಜೆಕ್ಟ್‌ನ್ನು ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಮು ಎಲ್ ಮತ್ತು ಅತುಲ್ ಭಟ್ ಅವರ ಮಾರ್ಗದರ್ಶನದಲ್ಲಿ ಪ್ರಸ್ತುತ ಪಡಿಸಿತ್ತು.

ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿಗಳ ಈ ತಂಡ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಎರಡನೇ ಸ್ಥಾನವನ್ನು ಗೆದ್ದು ಕೊಂಡಿತ್ತು. ಇದೇ ಡಿ.2ರಿಂದ 4ರ ವರೆಗೆ ಪಾಟ್ನಾದ  ಪಾಟಲಿಪುತ್ರ ವಿಶ್ವವಿದ್ಯಾಲಯದಲ್ಲಿ ನಡೆದ 36ನೇ ವಾರ್ಷಿಕ ಐಎಪಿಟಿ ಸಮಾವೇಶದಲ್ಲಿ ಷಹಜಹಾನ್ ಇಕ್ಬಾಲ್ ಈ ಪ್ರೊಜೆಕ್ಟನ್ನು  ಪ್ರಸ್ತುತ ಪಡಿಸಿದ್ದು ತಂಡದ ಪರವಾಗಿ ನಗದು ಬಹುಮಾನ ಸ್ವೀಕರಿಸಿದರು.

ಪ್ರಸ್ತುತಿಯ ಸಂದರ್ಭದಲ್ಲಿ ಅವರು ಹಲವಾರು ಭೌತಶಾಸ್ತ್ರ ಪುಸ್ತಕಗಳ ಖ್ಯಾತ ಲೇಖಕರು  ಹಾಗೂ ಐಐಟಿ ಕಾನ್ಪುರದ ವಿಶ್ರಾಂತ ಪ್ರಾಧ್ಯಾಪಕರಾದ ಪದ್ಮಶ್ರೀ ಪ್ರೊ. ಎಚ್.ಸಿ. ವರ್ಮಾರನ್ನು ಭೇಟಿಯಾದರು. ಇಕ್ಬಾಲ್ ಅವರ ಸಂಶೋಧನಾ ಪ್ರಬಂಧ ಹಾಗೂ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ ತಂಡದ ಕಾರ್ಯವನ್ನು  ಶ್ಲಾಘಿಸಿದರು.

ಕಾಲೇಜಿನ ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ವಿದ್ಯಾರ್ಥಿ ಗಳ ಈ ಸಾಧನೆಯನ್ನು ಅಭಿನಂದಿಸಿದ್ದಾರೆ.

share
Next Story
X