ಚಾರ್ಮಾಡಿ ಘಾಟ್ ನಲ್ಲಿ ಬೈಕ್ ಪಲ್ಟಿ: ಮೂವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯವಾದ ಘಟನೆ ಡಿ.7 ರಂದು ರಾತ್ರಿ ನಡೆದಿದೆ.
ಬೈಕ್ 7 ನೇ ತಿರುವಿನಿಂದ 6 ನೇ ತಿರುವಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಯುವರಾಜ್ (20), ಆನಂದ ಬಾಬು(29), ಅನಿಲ್ ಕುಮಾರ್(28) ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಮೂವರು ಊರಿಂದ ವಾಪಾಸು ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story