Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಗಡಿ ವಿವಾದ’ ಬಿಜೆಪಿ ಸರಕಾರಗಳಿಂದಲೇ...

‘ಗಡಿ ವಿವಾದ’ ಬಿಜೆಪಿ ಸರಕಾರಗಳಿಂದಲೇ ಉದ್ವಿಗ್ನ ಸ್ಥಿತಿ ನಿರ್ಮಾಣ: ಸಿದ್ದರಾಮಯ್ಯ ಆಕ್ರೋಶ

''ಸಂಧಾನದ ಮೂಲಕ ಪರಿಹರಿಸಬೇಕಿದ್ದ ವಿವಾದವನ್ನು ಬೆಳೆಯಲು ಬಿಟ್ಟು ಚಂದ ನೋಡುತ್ತಾ ಕೂತಿದೆ...''

8 Dec 2022 9:52 PM IST
share
‘ಗಡಿ ವಿವಾದ’ ಬಿಜೆಪಿ ಸರಕಾರಗಳಿಂದಲೇ ಉದ್ವಿಗ್ನ ಸ್ಥಿತಿ ನಿರ್ಮಾಣ: ಸಿದ್ದರಾಮಯ್ಯ ಆಕ್ರೋಶ
''ಸಂಧಾನದ ಮೂಲಕ ಪರಿಹರಿಸಬೇಕಿದ್ದ ವಿವಾದವನ್ನು ಬೆಳೆಯಲು ಬಿಟ್ಟು ಚಂದ ನೋಡುತ್ತಾ ಕೂತಿದೆ...''

ಬೆಂಗಳೂರು, ಡಿ.8: ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಎರಡೂ ಕಡೆ ಬಿಜೆಪಿಯದೇ ಸರಕಾರವಿದೆ. ಈ ಎರಡೂ ಸರಕಾರಗಳು ಮಾತನಾಡಿಕೊಂಡು ಬೇಕಂತಲೇ ಉದ್ವಿಗ್ನ ಸ್ಥಿತಿ ನಿರ್ಮಾಣ ಮಾಡುತ್ತಿರಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮಹಾಜನ್ ಆಯೋಗದ ವರದಿ ಪ್ರಕಾರ ಈಗಾಗಲೇ ಇತ್ಯರ್ಥ ಆಗಿದೆ. ಆದರೆ, ಮಹಾರಾಷ್ಟ್ರದವರು ರಾಜಕೀಯ ಕಾರಣಕ್ಕಾಗಿ ಇದನ್ನು ಜೀವಂತವಾಗಿಟ್ಟುಕೊಂಡು ಕೆದಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಈಗ ಅಲ್ಲಿನ ಸರಕಾರ ಬೆಳಗಾವಿ ತಮಗೆ ಸೇರಬೇಕು ಎಂದು ಸುಪ್ರೀಂಕೋರ್ಟ್‍ನಲ್ಲಿ ಮನವಿ ಸಲ್ಲಿಸಿದೆ. ಇದನ್ನು ನಾವಿದ್ದಾಗಲೂ ಮನವಿ ಹಾಕಿದ್ದರು. ಆಗ ನಾವು ಈ ಮನವಿ ವಿಚಾರಣೆಗೆ ಅರ್ಹವಾದುದ್ದಲ್ಲ ಎಂದು ವಾದ ಮಂಡಿಸಿದ್ದೆವು. ಈಗ ಸರಕಾರ ಒಳ್ಳೆ ವಕೀಲರನ್ನು ಇಟ್ಟು ವಾದ ಮಾಡಿಸುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು. 

ರಾಜ್ಯದ ಬಸ್ಸುಗಳಿಗೆ ಕಲ್ಲು ಹೋಡೆದರೆ, ಪುಂಡಾಟ ಮಾಡಿದರೆ ಇಲ್ಲಿನ ಮುಖ್ಯಮಂತ್ರಿ, ಪ್ರಧಾನಿ ಬಳಿ ಹೋಗಿ ಮಾತನಾಡಬೇಕು ಮತ್ತು ಅವರಿಂದ ಇಂಥಾ ಪುಂಡಾಟಗಳನ್ನು ಮಾಡದಂತೆ ಹೇಳಿಸಬೇಕು. ಪ್ರಕರಣ ಸುಪ್ರೀಂಕೋರ್ಟ್ ನಲ್ಲಿ ಇರುವಾಗ ಅದನ್ನು ಈ ರೀತಿ ವಿವಾದ ಯಾಕೆ ಮಾಡಬೇಕು? ಅವರು ಕೋರ್ಟ್ ನಲ್ಲಿ ಹೋರಾಟ ಮಾಡಲಿ, ನಾವು ಮಾಡೋಣ ಎಂದು ಸಿದ್ದರಾಮಯ್ಯ ಹೇಳಿದರು. 

ಕರ್ನಾಟಕದ ನೆಲ, ಜಲ, ಭಾಷೆ ಈ ವಿಚಾರದಲ್ಲಿ ಯಾವ ರಾಜಿಯೂ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ನಮ್ಮದು. ಬೆಳಗಾವಿಯ ಒಂದೇ ಒಂದು ಇಂಚು ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಎರಡೂ ಕಡೆ ಬಿಜೆಪಿ ಸರಕಾರವೇ ಇರುವುದರಿಂದ ಬಸವರಾಜ ಬೊಮ್ಮಾಯಿ ಪ್ರಧಾನಿ, ಗೃಹ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಹಾರಾಷ್ಟ್ರ ಸರಕಾರಕ್ಕೆ ಪುಂಡಾಟಿಕೆ ಮಾಡದಂತೆ ತಿಳಿಸಬೇಕು ಎಂದು ಅವರು ಆಗ್ರಹಿಸಿದರು.

ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರಕಾರ ಚಂದ ನೋಡುತ್ತಾ ಕೂತಿದೆ. ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಸರಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಬಸವರಾಜ ಬೊಮ್ಮಾಯಿ ಆ ರಾಜ್ಯದ ಮುಖ್ಯಮಂತ್ರಿಯನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು. ‘ಡಬಲ್ ಎಂಜಿನ್ ಸರಕಾರ’ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರಕಾರದ ನೆರವನ್ನು ಪಡೆಯಬೇಕು ಎಂದು ಅವರು ಹೇಳಿದರು. 

share
Next Story
X