Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯರ ರಕ್ಷಣೆ, ಹಿಂದೂ ವಿವಾಹ...

ಮಹಿಳೆಯರ ರಕ್ಷಣೆ, ಹಿಂದೂ ವಿವಾಹ ಕಾಯಿದೆಯಡಿ ಪತ್ನಿ ಪರಿಹಾರ ಪಡೆಯಲು ಅರ್ಹ: ಹೈಕೋರ್ಟ್

8 Dec 2022 10:02 PM IST
share
ಮಹಿಳೆಯರ ರಕ್ಷಣೆ, ಹಿಂದೂ ವಿವಾಹ ಕಾಯಿದೆಯಡಿ ಪತ್ನಿ ಪರಿಹಾರ ಪಡೆಯಲು ಅರ್ಹ: ಹೈಕೋರ್ಟ್

ಬೆಂಗಳೂರು, ಡಿ.8: ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯಿದೆಯಡಿಯಲ್ಲಿ ಪರಿಹಾರ ಪಡೆದುಕೊಂಡಿದ್ದರೂ, ಹಿಂದೂ ವಿವಾಹ ಕಾಯಿದೆ ಅಡಿಯಲ್ಲಿ ಪತ್ನಿ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಹಿಂದೂ ವಿವಾಹ ಕಾಯಿದೆ ಸೆಕ್ಷನ್ 24ರ ಅಡಿಯಲ್ಲಿ 30 ಸಾವಿರ ರೂ.ಗಳನ್ನು ಪರಿಹಾರ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಿರಣ್(ಹೆಸರು ಬದಲಿಸಲಾಗಿದೆ) ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ನ್ಯಾಯಪೀಠ, ಎರಡೂ ಕಾಯಿದೆಗಳ ಅಡಿಯಲ್ಲಿ ಪ್ರತ್ಯೇಕ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಮಹಿಳೆಯರ ರಕ್ಷಣೆ ಮತ್ತು ಕೌಟುಂಬಿಕ ಕಲಹಗಳಿಂದ ಮಹಿಳೆಯರ ರಕ್ಷಣೆ ಕಾಯಿದೆ 2005ರ ಸೆಕ್ಷನ್ 12ರ ಅಡಿಯಲ್ಲಿ ನಿರ್ವಹಣಾ ವೆಚ್ಚದಲ್ಲಿ ತನ್ನ ಪತ್ನಿ ಈಗಾಗಲೇ 20 ಸಾವಿರ ರೂ.ಗಳ ಪಡೆದುಕೊಳ್ಳುತ್ತಿದ್ದಾಳೆ. 

ಹೀಗಾಗಿ ಹೆಚ್ಚುವರಿಯಾಗಿ 10 ಸಾವಿರ ರೂ. ಪರಿಹಾರ ನೀಡುವಂತೆ ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು.

ಇದನ್ನು ತಳ್ಳಿ ಹಾಕಿರುವ ಹೈಕೋರ್ಟ್, ಕೌಟುಂಬಿಕ ಕಲಹ ಕಾಯಿದೆ ಸೆಕ್ಷನ್ 20(1)ಡಿ ಅಡಿ ಹಾಗೂ ದಂಡ ಪ್ರಕ್ರಿಯ ಸಂಹಿತೆ 125ರ ಅಡಿಯಲ್ಲಿ ಪತ್ನಿಯಾದವರು ನಿರ್ವಹಣಾ ವೆಚ್ಚವಾಗಿ ಪರಿಹಾರವನ್ನು ಪಡೆದುಕೊಳ್ಳುವುದಕ್ಕೆ ಅವಕಾಶವಿದೆ. ಅಲ್ಲದೆ, ಹಿಂದೂ ವಿವಾಹ ಕಾಯಿದೆ ಮತ್ತು ಹಿಂದೂ ದತ್ತು ನಿರ್ವಹಣೆ ಕಾಯಿದೆಯ 1956ರ ಅಡಿಯಲ್ಲಿ ಪರಿಹಾರ ಕೇಳಬಹುದು ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕಾಯಿದೆಗಳ ಅಡಿಯಲ್ಲಿ ಪ್ರತ್ಯೇಕ ಪರಿಹಾರ ಪಡೆದುಕೊಳ್ಳಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪ್ರಕರಣವೇನು: ಅರ್ಜಿದಾರರಾಗಿರುವ ಕಿರಣ್ ಅವರು ಪ್ರತಿವಾದಿಯಾಗಿರುವ ಸವಿತಾ(ಹೆಸರುಗಳನ್ನು ಬದಲಿಸಲಾಗಿದೆ) ಅವರನ್ನು 2018ರ ಡಿ.31ರಂದು ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು. 2020ರ ಡಿ.11ರಲ್ಲಿ ಸವಿತಾ ಕಿರುಕುಳ ಆರೋಪದಲ್ಲಿ ದೂರು ದಾಖಲಿಸಿದ್ದರು. 

ಬಳಿಕ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯಿದೆಯಡಿ ಸಿವಿಲ್ ನ್ಯಾಯಾಲಯದ ಮುಂದೆ ಪ್ರಕರಣ ದಾಖಲಿಸಿದ್ದರು. ಈ ನಡುವೆ ಕಿರಣ್ ಅವರು ಸವಿತಾ ಅವರಿಗೆ ಮಧ್ಯಂತರ ಪರಿಹಾರವಾಗಿ 20 ಸಾವಿರ ನೀಡುವುದಕ್ಕೆ ನ್ಯಾಯಾಲಯ ಸೂಚನೆ ನೀಡಿತ್ತು. ಇದರ ನಡುವೆ ಕಿರಣ್ ವಿವಾಹ ವಿಚ್ಛೇದನ ನೀಡುವಂತೆ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ಪರಿಹಾರವಾಗಿ ಮತ್ತೆ 10 ಸಾವಿರ ರೂ.ಗಳ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

share
Next Story
X