ಸಿನೆಮಾ ನೋಡಲು ಹೋದ ವಿದ್ಯಾರ್ಥಿಗೆ ಹಲ್ಲೆ ಆರೋಪ: ಪ್ರಕರಣ ದಾಖಲು

ಸುಳ್ಯ: ಚಲನಚಿತ್ರ ಮಂದಿರದ ಬಳಿ ಸಿನಿಮಾ ನೋಡಲೆಂದು ಹೋಗಿದ್ದ ಓರ್ವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಅಸಭ್ಯವಾಗಿ ವರ್ತಿಸುತ್ತಿದ್ದರೆಂದು ಯವಕರ ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ವರದಿಯಾಗಿದೆ.
ಚಿತ್ರಮಂದಿರದ ಆವರಣದ ವಾಹನ ಪಾರ್ಕಿಂಗ್ ಸ್ಥಳದಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ನಿಂತುಕೊಂಡಿದ್ದರೆನ್ನಲಾಗಿದೆ. ಅದನ್ನು ಗಮನಿಸಿದ ಯುವಕರ ತಂಡ ಅವರನ್ನು ಪ್ರಶ್ನಿಸಿ ವಿದ್ಯಾರ್ಥಿಗೆ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಯ ಬಗ್ಗೆ ಮಾಹಿತಿ ಅರಿತ ಸುಳ್ಯ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಹಲ್ಲೆಗೆ ಒಳಗಾದ ವಿದ್ಯಾರ್ಥಿ ಒಂದು ದಿನ ತಡವಾಗಿ ದೂರನ್ನು ಇ-ಮೇಲ್ ಮೂಲಕ ಪೊಲೀಸ್ ಠಾಣೆಗೆ ನೀಡಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story