Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುತೂಹಲ ಮೂಡಿಸಿದ ಬಿಜೆಪಿ ನಾಯಕ ಎಚ್....

ಕುತೂಹಲ ಮೂಡಿಸಿದ ಬಿಜೆಪಿ ನಾಯಕ ಎಚ್. ವಿಶ್ವನಾಥ್ - ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ

9 Dec 2022 6:06 PM IST
share
ಕುತೂಹಲ ಮೂಡಿಸಿದ ಬಿಜೆಪಿ ನಾಯಕ ಎಚ್. ವಿಶ್ವನಾಥ್ - ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ

ಬೆಂಗಳೂರು, ಡಿ. 9: ಬಿಜೆಪಿಯ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚಿಸಿದ್ದ ಎಚ್.ವಿಶ್ವನಾಥ್ ಅವರು, ಇದೀಗ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ಸಂಬಂಧ ಊಹಾಪೋಹ ಸೃಷ್ಟಿಸಿವೆ.

ಆಡಳಿತಾರೂಢ ಬಿಜೆಪಿ ಸರಕಾರ ಹಾಗೂ ಆ ಪಕ್ಷದ ಮುಖಂಡರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ವಿಶ್ವನಾಥ್, ತಮ್ಮ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಮರಳಿ ಕಾಂಗ್ರೆಸ್‍ಗೆ ಮರಳಲಿದ್ದಾರೆಂದು ಹೇಳಲಾಗಿದೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರನ್ನು ಭೇಟಿ ಮಾಡಿದ್ದಾರೆಂದು ಗೊತ್ತಾಗಿದೆ. ಈ ವೇಳೆ ಪರಿಷತ್ ಮಾಜಿ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಹಾಜರಿದ್ದರು.

ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಭೇಟಿ ಮಾಡಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾನು ಹಾಗೂ ವಿಶ್ವನಾಥ್ ಇಬ್ಬರೂ ಶ್ರೀನಿವಾಸ್ ಪ್ರಸಾದ್ ಅವರ ಕೈಕೆಳಗೆ ಯೂತ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳಾಗಿ ಕೆಲಸ ಮಾಡಿದ್ದೇವೆ. ಆಗಿನಿಂದಲೂ ನಾವು ಹಲವು ಸರ್ಕಾರಗಳಲ್ಲಿ ಸಚಿವರಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ.

ಅವರಿಗೆ ಸಾಕಷ್ಟು ಅನುಭವ, ಆಲೋಚನೆಗಳಿದ್ದು, ಪಕ್ಷದ ಪ್ರಣಾಳಿಕೆಯಲ್ಲಿ ರಾಜ್ಯದ ಹಿತಕ್ಕಾಗಿ ಏನೆಲ್ಲಾ ಅಗತ್ಯವಿದೆ ಎಂದು ಚರ್ಚೆ ಮಾಡಿದ್ದೇವೆ. ಆತ್ಮೀಯತೆ ಮೇರೆಗೆ ನನ್ನನ್ನು ಭೇಟಿ ಮಾಡಿದ್ದಾರೆ. ಶಾಲೆಗಳಲ್ಲಿ ಬಿಸಿಯೂಟ ಕಾರ್ಯಕ್ರಮವನ್ನು ವಿಶ್ವನಾಥ್ ಅವರು ಶಿಕ್ಷಣ ಸಚಿವರಾಗಿದ್ದಾಗ ಮೊದಲು ಹೈದರಾಬಾದ್ ಕರ್ನಾಟಕ ಭಾಗದ ಶಾಲೆಗಳಲ್ಲಿ ಜಾರಿಗೆ ತಂದಿದ್ದರು. ರಾಜ್ಯದ ಹಿತಕ್ಕಾಗಿ ಚರ್ಚೆ ಮಾಡಿದ್ದೇವೆ. ಯಾವುದೇ ರಾಜಕೀಯ ವಿಚಾರ ಮಾತನಾಡಿಲ್ಲ’ ಎಂದು ತಿಳಿಸಿದರು.

ರಾಜಕೀಯ ನಿಂತ ನೀರಲ್ಲ: ‘ಎಚ್.ವಿಶ್ವನಾಥ್, ಬಿಜೆಪಿ ಬಿಡುವ ಬಗ್ಗೆ ನನಗೆ ಗೊತ್ತಿಲ್ಲ. ಅದು ಅವರಿಗೆ ಬಿಟ್ಟದ್ದು. ಅವರ ಪಕ್ಷದ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ನನ್ನ ಪಕ್ಷದ ವಿಚಾರದ ಬಗ್ಗೆ ಮಾತ್ರ ಗಮನಹರಿಸುತ್ತೇನೆ. ಪಕ್ಷ ಸೇರ್ಪಡೆ ಊಹಾಪೋಹಗಳು ನಮಗೆ ಬೇಡ. ರಾಜಕೀಯದಲ್ಲಿ ಯಾರೂ ಶಾಶ್ವತವಲ್ಲ. ಮಸ್ಕಿ, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷ ಬಿಟ್ಟು ಹೋದವರ ಜಾಗಕ್ಕೆ ಬೇರೆಯವರು ಬಂದಿದ್ದಾರೆ. ಹೀಗೆ ಒಬ್ಬರು ಖಾಲಿಯಾದರೆ ಆ ಸ್ಥಾನಕ್ಕೆ ಬೇರೆಯವರು ಬರುತ್ತಾರೆ. ವಿ.ಎಸ್.ಪಾಟೀಲ್, ಯು.ಬಿ.ಬಣಕಾರ್ ಪಕ್ಷಕ್ಕೆ ಸೇರಿದ್ದಾರೆ. ಜೆಡಿಎಸ್‍ನಿಂದ ಸೋತವರು ಅರ್ಜಿ ಹಾಕಿದ್ದಾರೆ. ರಾಜಕೀಯ ನಿಂತ ನೀರಲ್ಲ. ಏನೂ ಬೇಕಾದರೂ ಆಗಬಹುದು. ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿರುವುದು ಪಕ್ಷಕ್ಕೆ ಹಿನ್ನಡೆಯಾಗುವುದಿಲ್ಲ’

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
Next Story
X