ಮಂಗಳೂರು: ಬಸ್ ಢಿಕ್ಕಿ ಹೊಡೆದು ಯುವತಿ ಮೃತ್ಯು ಪ್ರಕರಣ; ಚಾಲಕನ ಸೆರೆ

ಮಂಗಳೂರು: ನಗರದ ಕೊಟ್ಟಾರ ಚೌಕಿ ಸಮೀಪದ ಕಲ್ಲುರ್ಟಿ ದೈವಸ್ಥಾನದ ಎದುರು ರಸ್ತೆ ದಾಟುತ್ತಿದ್ದಾಗ ಬಸ್ ಢಿಕ್ಕಿಯಾಗಿ ಮೇಘಾ ರಂಜಿತ್ ಪೈ (34) ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಸ್ ಚಾಲಕ ಪದವಿ ನಂಗಡಿಯ ಶರಣ್ ಕುಮಾರ್ (35) ಎಂಬಾತನನ್ನು ಸಂಚಾರ ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಶರಣ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 304ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಡಿ.17ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story