Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. “ಸಲಾಂ ಆರತಿ'' ಬದಲು “ಆರತಿ ನಮಸ್ಕಾರ'':...

“ಸಲಾಂ ಆರತಿ'' ಬದಲು “ಆರತಿ ನಮಸ್ಕಾರ'': ಸುತ್ತೋಲೆ ಹೊರಡಿಸಲು ನಿರ್ಧಾರ

ಪೂಜೆಯ ಹೆಸರಿನಲ್ಲಿ ಮಾತ್ರ ಬದಲಾವಣೆ–ಪೂಜೆ ರದ್ದುಪಡಿಸುವ ಯಾವುದೇ ಚಿಂತನೆ ಇಲ್ಲ: ಶಶಿಕಲಾ ಜೊಲ್ಲೆ

10 Dec 2022 3:09 PM IST
share
“ಸಲಾಂ ಆರತಿ ಬದಲು “ಆರತಿ ನಮಸ್ಕಾರ: ಸುತ್ತೋಲೆ ಹೊರಡಿಸಲು ನಿರ್ಧಾರ
ಪೂಜೆಯ ಹೆಸರಿನಲ್ಲಿ ಮಾತ್ರ ಬದಲಾವಣೆ–ಪೂಜೆ ರದ್ದುಪಡಿಸುವ ಯಾವುದೇ ಚಿಂತನೆ ಇಲ್ಲ: ಶಶಿಕಲಾ ಜೊಲ್ಲೆ

ಬೆಂಗಳೂರು: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ "ದೀವಟಿಗೆ ಸಲಾಂ'', “ಸಲಾಂ ಆರತಿ”ಮತ್ತು “ಸಲಾಂ ಮಂಗಳಾರತಿ”ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ ನಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನು ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಕೆಲವು ದೇವಾಲಯಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಸಂದರ್ಭಗಳಲ್ಲಿ ದೀವಟಿಗೆ ಹಿಡಿದು ದೇವಾಲಯಕ್ಕೆ ಮತ್ತು ದೇವರಿಗೆ ಆರತಿಯಂತೆ ನಡೆಸುವ ಕಾರ್ಯಕ್ಕೆ ದೀವಟಿಗೆ ಸಲಾಂ, ಸಲಾಂ ಮಂಗಳಾರತಿ ಮತ್ತು ಸಲಾಂ ಆರತಿ ಎಂದು ಕೆಲವು ದೇವಾಲಯಗಳಲ್ಲಿ ಕರೆಯಲಾಗುತ್ತಿದೆ. ಇದನ್ನು ಬದಲಾಯಿಸಬೇಕು ಎನ್ನುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಕ್ತಾದಿಗಳಿಂದ ಸಾಕಷ್ಟು ಒತ್ತಾಯ ಇರುವ ಬಗ್ಗೆ, ಧಾರ್ಮಿಕ ಪರಿಷತ್ನ ಸದಸ್ಯರು ಸಭೆಯ ಗಮನಕ್ಕೆ ತಂದರು. ಇದರ ಹಿನ್ನಲೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ ನಲ್ಲಿ ವಿಸ್ತೃತ ಚರ್ಚೆಯನ್ನು ನಡೆಸಲಾಯಿತು ಎಂದು ಹೇಳಿದರು.

ಈ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮ ಪಂಡಿತರ ಅಭಿಪ್ರಾಯದಂತೆ ದೇವಾಲಯಗಳಲ್ಲಿ ಇನ್ನು ಮುಂದೆ “ದೀವಟಿಗೆ ಸಲಾಂ”ಎಂಬ ಪದದ ಬದಲಾಗಿ “ದೀವಟಿಗೆ ನಮಸ್ಕಾರ”ಎಂದು, “ಸಲಾಂ ಆರತಿ” ಎಂಬ ಪದದ ಬದಲಾಗಿ “ಆರತಿ ನಮಸ್ಕಾರ”ಎಂದು ಹಾಗೂ ʼಸಲಾಂ ಮಂಗಳಾರತಿ”ಎಂಬ ಪದದ ಬದಲಾಗಿ “ಮಂಗಳಾರತಿ ನಮಸ್ಕಾರ” ಎಂದು ಹೆಸರನ್ನು ಬದಲಾಯಿಸಿಕೊಂಡು ಸೇವೆಗಳನ್ನು ಮತ್ತು ಸೇವಾಕಾರ್ಯಗಳನ್ನು ಮುಂದುವರೆಸಲು ಸುತ್ತೋಲೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸಲಾಂ ಆರತಿ ಪೂಜೆ ರದ್ದುಪಡಿಸಲಾಗಿಲ್ಲ: ಕೇವಲ ಬೇರೆ ಭಾಷೆಯ ಪದಗಳನ್ನು ಬದಲಾಯಿಸಿ, ನಮ್ಮ ಭಾಷೆಯ ಪದವನ್ನು ಅಳವಡಿಸಿ ಈ ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಮತ್ತು ಪೂಜೆಗಳನ್ನು ಮುಂದುವರೆಸಲಾಗುವುದು. ಪೂಜಾ ಕಾರ್ಯಗಳನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ದೇವಸ್ಥಾನಗಳ ಆಡಿಟ್‌ ಹೊಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಲಾಗಿಲ್ಲ: ರಾಜ್ಯ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ಎ ಮತ್ತು ಬಿ ವರ್ಗದ ದೇವಸ್ಥಾನಗಳು ಪ್ರತಿವರ್ಷ ಆಡಿಟ್‌ ಮಾಡಿಸುವುದು ಕಡ್ಡಾಯ. ಆದರೆ, ಹಲವಾರು ದೇವಸ್ಥಾನಗಳಲ್ಲಿ ಹಲವಾರು ವರ್ಷಗಳಿಂದ ಆಡಿಟ್‌ ಮಾಡಿಸಿರಲಿಲ್ಲ. ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಜವಾಬ್ದಾರಿ ತಗೆದುಕೊಂಡ ನಂತರ ದೇವಸ್ಥಾನಗಳ ಆಡಳಿತದಲ್ಲಿ, ಭಕ್ತರು ನೀಡುವ ಕಾಣಿಕೆಯ ಬಳಕೆಯ ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಡಿಟ್‌ ವರದಿಯನ್ನ ಆಯಾ ವರ್ಷವೇ ಸಲ್ಲಿಸುವುದರ ಬಗ್ಗೆ ಕಟ್ಟುನಿಟ್ಟು ಆದೇಶ ನೀಡಲಾಗಿತ್ತು. ದೇವಸ್ಥಾನಗಳು ತಮ್ಮ ಆಡಿಟ್‌ ವರದಿಯನ್ನ ಸರ್ಕಾರಿ ಲೆಕ್ಕಪತ್ರ ಇಲಾಖೆಯಿಂದಲೇ ಆಡಿಟ್‌ ಮಾಡಿಸಿ ವರದಿ ಸಲ್ಲಿಸಿದ್ದಾರೆ. ಖಾಸಗಿ ಸಂಸ್ಥೆಗಳಿಗೆ ಆಡಿಟ್‌ ಹೊಣೆಯನ್ನು ನೀಡಲಾಗಿದೆ ಎನ್ನುವ ಕೆಲವರ ಆರೋಪ ಸತ್ಯಕ್ಕೆ ದೂರವಾಗಿದೆ.

share
Next Story
X