ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುವುದು: ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು, ಡಿ.10: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ವಾರದಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ ಸಂದರ್ಭದಲ್ಲಿ ಸುದ್ದಿ ಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಮಂಗಳೂರು-ಬೆಂಗಳೂರು ನಡುವೆ ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಯ ಬಗ್ಗೆ ಮಾಧ್ಯಮ ಪ್ರತಿ ನಿಧಿಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಮುಂತ್ರಿ ಶೀಘ್ರ ದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರ ಸಭೆ ನಡೆಸಿ ಈಗ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತ ಗೊಳಿಸಲು ಪ್ರಯತ್ನಿಸಲಾಗುವುದು ಎಂದರು.
ಅವರು ಬಳಿಕ ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾ ಕೇಂದ್ರದ ಕ್ರೀಡಾ ಹಾಗೂ ಸಾಂಸ್ಕೃತಿ ಕೋತ್ಸವ ಉದ್ಘಾಟಿಸಲು ತೆರಳಿದರು. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಶಾಸಕರಾದ ರಾಜೇಶ್ ನಾಯಕ್, ಮನಪಾ ಮೇಯರ್ ಜಯಾನಂದ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.