ಶಿವಮೊಗ್ಗ: ಲಾರಿ-ಕಾರು ಢಿಕ್ಕಿ; ಮೂವರು ಸ್ಥಳದಲ್ಲೇ ಮೃತ್ಯು
ಶಿವಮೊಗ್ಗ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಕಾರು ಚಾಲಕ ಕಾರ್ತಿಕ್ (21), ವಿವೇಕ್(21), ಮೋಹನ (21) ಎಂದು ತಿಳಿದು ಬಂದಿದೆ. ಮೃತರು ದಾವಣಗೆರೆ ಮೂಲದವರು ಎಂದು ಹೇಳಲಾಗುತ್ತಿದ್ದು, ರುದ್ರೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಬಳಿ ಕಾರಿಗೆ ಗೂಡ್ಸ್ ಲಾರಿ ಢಿಕ್ಕಿ ಹೊಡೆದಿದ್ದು, ಗಾಯಗೊಂಡಿರುವ ವ್ಯಕ್ತಿಯನ್ನು ಶಿವಮೊಗ್ಗ ಮೆಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಅಭಯ್ ಪ್ರಕಾಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Next Story