Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಧ್ಯಮ ಹಂತದ ಪೊಲೀಸರಿಗೆ ವಿಶೇಷ ತರಬೇತಿ:...

ಮಧ್ಯಮ ಹಂತದ ಪೊಲೀಸರಿಗೆ ವಿಶೇಷ ತರಬೇತಿ: ಬೊಮ್ಮಾಯಿ

"ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ"

11 Dec 2022 12:27 PM IST
share
ಮಧ್ಯಮ ಹಂತದ ಪೊಲೀಸರಿಗೆ ವಿಶೇಷ ತರಬೇತಿ: ಬೊಮ್ಮಾಯಿ
"ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ"

ಬೆಂಗಳೂರು: ಎನ್ ಡಿಎ ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿರುವ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭ - 2022ರಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಅವರೊಂದಿಗೆ  ಪಾಲ್ಗೊಂಡು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

ತಳ ಹಂತ ಪೊಲೀಸರು ಹಾಗೂ ಐಪಿಎಸ್ ಗಳ ತರಬೇತಿ ಚೆನ್ನಾಗಿ ಆಗುತ್ತಿದೆ. ಆದರೆ ಮಧ್ಯಮ ಹಂತದಲ್ಲಿ ಪೊಲೀಸರ ತರಬೇತಿ ಇನ್ನೂ ಪರಿಣಾಮಕಾರಿಯಾಗಿ ಆಗಬೇಕಿದೆ. ಇದಕ್ಕೆ ಪ್ರತ್ಯೇಕ ತರಬೇತಿ ಸಂಸ್ಥೆ, ಪಠ್ಯ ಹಾಗೂ ವಿವಿಧ ಕೋರ್ಸುಗಳ ಮೂಲಕ  ಅವರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದರು.

ಪೊಲೀಸರು ಬಳಸುವ ತಂತ್ರಜ್ಞಾನ ಬಲಪಡಿಸುವ ವಿಶೇಷ ಕಾರ್ಯಕ್ರಮ: ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ನಿಯಂತ್ರಣ ಮಾಡುವುದು  ಪೊಲೀಸರ ಜವಾಬ್ದಾರಿಯಾಗಿದೆ. ತಂತ್ರಜ್ಞಾನ ದ ಮೂಲಕ ಅಪರಾಧಗಳು ಹೆಚ್ಚಾಗುತ್ತಿವೆ. ಅದೇ ತಂತ್ರಜ್ಞಾನ ದಲ್ಲಿ ಸಾಕ್ಚಿಗಳನ್ನು ಬಿಟ್ಡು ಹೋಗಿರುತ್ತಾರೆ. ಗೃಹ ಇಲಾಖೆ  ಪೊಲೀಸರು ಬಳಸುವ ತಂತ್ರಜ್ಞಾನ ವನ್ನು ಇನ್ನಷ್ಟು ಬಲಪಡಿಸುವ ಕಾರ್ಯಕ್ರಮವನ್ನು ಮಾಡಬೇಕು. ಅದಕ್ಕೆ ಬೇಕಾದ ಪರಿಣಿತರನ್ನು ಬಳಸಿಕೊಂಡು, ಬೇಕಾದ ಅನುದಾನ ಮುಂದಿನ ಬಜೆಟ್ ನಲ್ಲಿ ನೀಡಲಾಗುವುದು ಎಂದರು.

ರಾಜ್ಯದ ಪ್ರತಿ ಪ್ರದೇಶದಲ್ಲಿ ಎರಡು ಫಾರೆನ್ಸಿಕ್ ಲ್ಯಾಬ್: ಪೊಲೀಸ್ ವ್ಯವಸ್ಥೆಯನ್ನು ಬಹಳ ಆಧುನಿಕರಣ ಮಾಡಿದ್ದೇವೆ. ಫಾರೆನ್ಸಿಕ್ ಲ್ಯಾಬ್ ಆಧುನಿಕರಣ ಮಾಡಲಾಗಿದೆ. ಅಪರಾಧ ಶೋಧನೆಯಲ್ಲಿ ಆಧುನಿಕ ಫಾರೆನ್ಸಿಕ್ ಲ್ಯಾಬ್ ನ ಅವಶ್ಯಕತೆಯಿದ್ದು, ಹುಬ್ಬಳ್ಳಿ ಮತ್ತು ಬಳ್ಳಾರಿ ಯಲ್ಲಿ ಈ ಪ್ರಯೋಗಾಲಯಗಳನ್ನು ಮಾಡಲಾಗಿದೆ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿ ಕನಿಷ್ಟ ಎರಡು ಫಾರೆನ್ಸಿಕ್ ಲ್ಯಾಬ್ ಸ್ಥಾಪಿಸಬೇಕು. ಶೀಘ್ರ ಅಪರಾಧ ಪತ್ತೆಗೆ ಈ ಕ್ರಮ ಆಗಲೇಬೇಕು ಎಂದರು.

ಪೊಲೀಸ್ ನೇಮಕಾತಿ ಅಪರಾಧ ತಡೆಯಲು ಕಠಿಣ ಕ್ರಮ: ಪೊಲೀಸ್ ನೇಮಕಾತಿಯಲ್ಲಿ ಆಗುತ್ತಿರುವ ಅಪರಾಧ ತಡೆಯಲು ಇನ್ನಷ್ಟು ಕನಿಷ್ಟ ಕ್ರಮ ಕೈಗೊಳ್ಳಲೇಬೇಕು. ಪೊಲಿಸ್ ನೇಮಕಾತಿಯಲ್ಲಿಯೇ ಅಕ್ರಮ ನಡೆದರೆ ಬೇರೆ ಅಪರಾಧ ತಡೆಯುವುದು ಸಾಧ್ಯವಿದೆಯೇ?. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಹರಿಸಬೇಕು. ಅದಕ್ಕೆ ಬೇಕಾದ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒನ್: ಪೊಲೀಸ್ ಸೇವೆ ವಿಶಿಷ್ಟ ಸೇವೆಯಾಗಿದ್ದು, ಅವರು ತಮ್ಮ ಬದುಕಿನಲ್ಲಿ ಬಹಳ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹತ್ತು ಹಲವಾರು ಒತ್ತಡಗಳ ನಡುವೆ ಕೆಲಸ ಮಾಡಬೇಕಾಗುತ್ತದೆ. ಎಲ್ಲ ಒತ್ತಡಗಳ ನಡುವೆ ಕರ್ನಾಟಕ ಪೊಲಿಸ್ ಉತ್ತಮ ಕೆಲಸ ಮಾಡುತ್ತಿದೆ. ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒನ್ ಆಗಿದ್ದು, ಶ್ರೇಷ್ಠ ಸೇವೆಯನ್ನು ಸಲ್ಲಿಸುತ್ತಿದೆ ಎಂಬ ಹೆಮ್ಮೆ ಇದೆ. ಪೊಲೀಸರಿಗೆ ಕಾನೂನು ತಂದೆ ಇದ್ದಂತೆ, ಕರ್ತವ್ಯ  ತಾಯಿ ಇದ್ದಂತೆ. ಕರ್ನಾಟಕ ಪೊಲೀಸರು ಯಾವುದೇ ಹೊಸ ತಂತ್ರಜ್ಞಾನದಿಂದ  ಹೊರಗುಳಿಯಬಾರು. ಈ ನಿಟ್ಟಿನಲ್ಲಿ  ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುದೀರ್ಘ ಸೇವೆಯಲ್ಲಿ ರಾಷ್ಟ್ರಪತಿಗಳನ್ನು ನಿಮ್ಮನ್ನು ಗುರುತಿಸುವುದು ರಾಜ್ಯಕ್ಕೆ ಹೆಮ್ಮೆಯ ವಿಷಯ. ತಾವು ಉತ್ತಮ ಕೆಲಸ  ಮಾಡಿದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುರುತಿಸುತ್ತವೆ‌. ಪ್ರಶಸ್ತಿ ಪಡೆದವರೆಲ್ಲರೂ ಈ ಪದಕಗಳಿಗೆ ಅರ್ಹರಾಗಿದ್ದು, ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಮಾರಂಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ,  ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಪ್ರವೀಣ್ ಸೂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
Next Story
X