ಮಂಗಳೂರು | ಚಿನ್ನಾಭರಣ ಮಳಿಗೆಯಲ್ಲಿ ಅನೈತಿಕ ಪೊಲೀಸ್‌ಗಿರಿ: ನಾಲ್ವರ ಸೆರೆ

ಮಂಗಳೂರು,ಡಿ.11: ನಗರದ ಚಿನ್ನಾಭರಣದ ಮಳಿಗೆಯೊಂದಕ್ಕೆ ನುಗ್ಗಿ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದ ಸಂಘಪರಿವಾರದ ಕಾರ್ಯಕರ್ತರು ಎನ್ನಲಾದ ನಾಲ್ಕು ಮಂದಿಯನ್ನು ಕದ್ರಿ ಪೊಲೀಸರು ರವಿವಾರ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎಂದು ಗುರುತಿಸಲಾಗಿದೆ. ಅನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ ಬೆನ್ನಿಗೆ ಈ ನಾಲ್ವರ ಬಂಧನವಾಗಿದೆ ಎಂದು ಹೇಳಲಾಗಿದೆ.
ಚಿನ್ನಾಭರಣ ಮಳಿಗೆಯ ಮಾರಾಟ ವಿಭಾಗದ ಯುವಕ ಮತ್ತು ಯುವತಿಯು ಅನ್ಯೋನ್ಯತೆಯಿಂದಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಗುಂಪು ಡಿ.6ರ ಸಂಜೆ ಯುವತಿಯ ಪೋಷಕರೊಂದಿಗೆ ಚಿನ್ನಾಭರಣದ ಮಳಿಗೆಗೆ ನುಗ್ಗಿ ಪೊಲೀಸರ ಸಮ್ಮುಖವೇ ಹಲ್ಲೆ ನಡೆಸಿತ್ತು ಎಂದು ಆರೋಪಿಸಲಾಗಿತ್ತು. ಈ ಕದ್ರಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಮಂಗಳೂರು: ಚಿನ್ನಾಭರಣದ ಮಳಿಗೆಗೆ ನುಗ್ಗಿ ಗುಂಪಿನಿಂದ ಹಲ್ಲೆ; ಮೂರು ಪ್ರತ್ಯೇಕ ಪ್ರಕರಣಗಳು ದಾಖಲು
Next Story