ರಾಜ್ಯದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ ಬರುತ್ತೆ: ಶಾಸಕ ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ: 'ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರ ಹಿಡಿಯಲಿದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಬರುತ್ತೆ' ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಕಾಂಗ್ರೆಸ್ಗೆ ನಾವೀಕನೇ ಇಲ್ಲದಂತಾಗಿದೆ. ಹೀಗಾಗಿಯೇ ಕಾಂಗ್ರೆಸ್ ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬರುತ್ತಿದ್ದಾರೆ. ಬಿಜೆಪಿಯಿಂದ ಯಾರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ' ಎಂದು ಹೇಳಿದರು.
'ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲೂ ಗುಜರಾತ್ ಮಾದರಿ ಚುನಾವಣೆ ಮಾಡುವುದು ವರಿಷ್ಠರಿಗೆ ಬಿಟ್ಟ ವಿಚಾರ' ಎಂದು ಇದೇ ವೇಳೆ ತಿಳಿಸಿದರು.
Next Story