ಉಳ್ಳಾಲ: ಯುನಿವೆಫ್ ಸೀರತ್ ಸಮಾವೇಶ

ಮಂಗಳೂರು, ಡಿ.11: ಯುನಿವೆಫ್ ಕರ್ನಾಟಕದ ‘ಮಾನವ ಸಮಾಜ, ಸಂಸ್ಕೃತಿ ಮತ್ತು ಪ್ರವಾದಿ ಮುಹಮ್ಮದ್ (ಸ)’ ಎಂಬ ಕೇಂದ್ರೀಯ ವಿಷಯದಲ್ಲಿ ನಡೆಯುತ್ತಿರುವ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಪ್ರಯುಕ್ತ ಉಳ್ಳಾಲ ನಗರ ಸಭೆ ಮೈದಾನದಲ್ಲಿ ಸೀರತ್ ಸಮಾವೇಶ ನಡೆಯಿತು.
‘ನಮ್ಮ ಜೀವನ ಮತ್ತು ಪ್ರವಾದಿ (ಸ)ರ ಬೋಧನೆಗಳು’ ಎಂಬ ವಿಷಯದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಮುಖ್ಯ ಭಾಷಣ ಮಾಡಿದರು.
ಸಾಮಾಜಿಕ ಕಾರ್ಯಕರ್ತ ನಝೀರ್ ಉಳ್ಳಾಲ್ ಮಾತನಾಡಿದರು. ಅಭಿಯಾನ ಸಂಚಾಲಕ ಯು.ಕೆ.ಖಾಲಿದ್ ಉಳ್ಳಾಲ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಸಂಚಾಲಕ ಆಸಿಫ್ ಕುದ್ರೋಳಿ ವೇದಿಕೆಯಲ್ಲಿ ಉಪಸ್ಥಿತರಿ ದ್ದರು. ಉಮರ್ ಮುಖ್ತಾರ್ ಕಿರಾಅತ್ ಪಠಿಸಿದರು. ಉಳ್ಳಾಲ ಶಾಖಾಧ್ಯಕ್ಷ ಫಝಲ್ ಮುಹಮ್ಮದ್ ಕಾರ್ಯಕ್ರಮ ನಿರೂಪಿಸಿದರು.
Next Story