'ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ'; ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಒತ್ತಾಯ
ಬೆಳಗಾವಿ, ಡಿ.12: ಗಡಿ ವಿವಾದದ ಬೆನ್ನಲ್ಲೇ ಕೇಂದ್ರ ಸರ್ಕಾರ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ರವಿವಾರ ತಾಲೂಕಿನ ಬೆಳಗುಂದಿಯಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ 'ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥ ಆಗುವವರೆಗೆ ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡಿ, ಇಲ್ಲ ಮರಾಠಿ ಭಾಷೆಯಲ್ಲಿ ದಾಖಲೆ ನೀಡಿ' ಎಂದು ನಿರ್ಣಯ ಅಂಗೀಕಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
'ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಇತ್ಯರ್ಥವಾಗುವವರೆಗೂ ಗಡಿಭಾಗವನ್ನ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಿ.ಇಲ್ಲವೇ ಗಡಿಭಾಗದಲ್ಲಿ ಮರಾಠಿ ಭಾಷಿಕರಿಗೆ ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲಾತಿ ನೀಡಲಿ. ಈ ಕುರಿತು ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಿ' ಎಂದು ಎಂಇಎಸ್ ಮುಖಂಡ ಶಿವಾಜಿ ಸುಂಟಕರ್ ಒತ್ತಾಯಿಸಿದ್ದಾರೆ.
Next Story