Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿ.19ರಿಂದ ಚಳಿಗಾಲದ ಅಧಿವೇಶನ; ಸಚಿವರು,...

ಡಿ.19ರಿಂದ ಚಳಿಗಾಲದ ಅಧಿವೇಶನ; ಸಚಿವರು, ಶಾಸಕರ ಹಾಜರಾತಿ ಕಡ್ಡಾಯ: ಸ್ಪೀಕರ್ ಕಾಗೇರಿ

12 Dec 2022 7:04 PM IST
share
ಡಿ.19ರಿಂದ ಚಳಿಗಾಲದ ಅಧಿವೇಶನ; ಸಚಿವರು, ಶಾಸಕರ ಹಾಜರಾತಿ ಕಡ್ಡಾಯ: ಸ್ಪೀಕರ್ ಕಾಗೇರಿ

ಬೆಳಗಾವಿ, ಡಿ.12: ಜನರ ಆಶಯಗಳನ್ನು ಈಡೇರಿಸುವ ಸಂಸದೀಯ ಮಾರ್ಗ ಅಧಿವೇಶನದ ಉದ್ದೇಶವಾಗಿರುತ್ತದೆ. ಆದುದರಿಂದ, ಜನರ ಭಾವನೆಗಳಿಗೆ ಸ್ಪಂದಿಸಿ, ಸಚಿವರು, ಶಾಸಕರು ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದ್ದಾರೆ.

ಸೋಮವಾರ ಬೆಳಗಾವಿಯ ಸುರ್ವಣ ವಿಧಾನಸೌಧದಲ್ಲಿ ಡಿ.19ರಿಂದ ಆರಂಭವಾಗಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಡಿ.19ರಿಂದ 30ರ ವರೆಗೆ ನಡೆಯಲಿರುವ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಯಾವುದೇ ರೀತಿಯ ಲೋಪ-ದೋಷಗಳಿಲ್ಲದೇ ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಕಳೆದ ಬಾರಿಯ ಅನುಭವದ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಹೇಳಿದರು. 

ಸದನದ ಕಾರ್ಯ ಕಲಾಪಗಳನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ವಿಭಾಗದ ಅಧಿಕಾರಿಗಳ ಜತೆ ಚರ್ಚಿಸಿ, ನಿರ್ದೇಶನಗಳನ್ನು ನೀಡಲಾಗಿದೆ. ಈ ಬಾರಿ ಮಹತ್ವದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದೆ. ಕೋವಿಡ್ ಇಲ್ಲದಿರುವುದರಿಂದ ಈ ಬಾರಿ ಯಾವುದೇ ರೀತಿಯ ನಿಬರ್ಂಧ ಇರುವುದಿಲ್ಲ. ಆದುದರಿಂದ, ಪ್ರಶ್ನೋತ್ತರ, ಶೂನ್ಯ ವೇಳೆ, ಮಸೂದೆ ಅಂಗೀಕಾರ ಸೇರಿದಂತೆ ಕಲಾಪದ ಎಲ್ಲ ಚಟುವಟಿಕೆಗಳು ಯಥಾ ಪ್ರಕಾರ ನಡೆಯಲಿವೆ ಎಂದು ಸ್ಪೀಕರ್ ತಿಳಿಸಿದರು.

ಕಲಾಪ ವೀಕ್ಷಣೆಗೆ ಅವಕಾಶ: ಸಾರ್ವಜನಿಕರಿಗೆ ಕಲಾಪ ವೀಕ್ಷಿಸಲು ಮುಕ್ತ ಅವಕಾಶ ನೀಡಲಾಗುವುದು. ಪ್ರವೇಶದ್ವಾರದ ಬಳಿ ಅಗತ್ಯ ಗುರುತಿನ ಚೀಟಿಯನ್ನು ನೀಡಿ ಪ್ರವೇಶ ಕಲ್ಪಿಸಲಾಗುತ್ತದೆ. 6 ಮಸೂದೆಗಳನ್ನು ಈ ಅಧಿವೇಶನದಲ್ಲಿ ತರಲಾಗುತ್ತಿದೆ. ಇದರಲ್ಲಿ ಎರಡು ಮಸೂದೆಗಳನ್ನು ಈಗಾಗಲೇ ಮಂಡಿಸಲಾಗಿದ್ದು, ಚರ್ಚಿಸಿ ಅವುಗಳನ್ನು ಅಂಗೀಕರಿಸುವ ಪ್ರಕ್ರಿಯೆ ನಡೆಯಲಿದೆ. ಇದಲ್ಲದೆ ನಾಲ್ಕು ಹೊಸ ವಿಧೇಯಕಗಳು ಬಂದಿವೆ. ಬೇರೆ ಯಾವುದೇ ವಿಧೇಯಕ ಇದ್ದರೆ ಸರಕಾರ ಅವುಗಳನ್ನು ಮಂಡಿಸಲಿದೆ ಎಂದು ಅವರು ಮಾಹಿತಿ ನೀಡಿದರು.

ಮೊದಲ ದಿನ ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುವುದು. ಆಯ್ಕೆ ಸಮಿತಿಯು ನೀಡುವ ವರದಿ ಆಧರಿಸಿ ಅತ್ಯುತ್ತಮ ಶಾಸಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಸಮಗ್ರ ಕರ್ನಾಟಕದ ಜತೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಸೂಕ್ತ ದಿನಗಳನ್ನು ನಿಗದಿಪಡಿಸಲಾಗುವುದು. ಅಧಿವೇಶನ ಹೊರತುಪಡಿಸಿ ಉಳಿದ ಅವಧಿಯಲ್ಲಿ ಸುವರ್ಣ ವಿಧಾನಸೌಧ ಸದ್ಬಳಕೆ ಅಗಬೇಕು. ಇಡೀ ವರ್ಷ ಕಟ್ಟಡದಲ್ಲಿ ಲವಲವಿಕೆಯಿಂದ ಚಟುವಟಿಕೆಗಳು ನಡೆಯಬೇಕು ಎಂಬ ಅಭಿಪ್ರಾಯಗಳಿವೆ ಎಂದು ಅವರು ತಿಳಿಸಿದರು. 

ಶಾಸಕರ ಭವನ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅಧಿವೇಶನದ ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ಹಾಜರಾಗಬೇಕು. ಅನಿವಾರ್ಯ ಸಂದರ್ಭಗಳಲ್ಲಿ ತಮ್ಮ ಅನುಮತಿ ಮೇರೆಗೆ ಕಲಾಪಗಳ ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದು ಸ್ಪೀಕರ್ ಹೇಳಿದರು.

ಇದಕ್ಕೂ ಮುನ್ನ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ನಗರ ಪೊಲೀಸ್ ಆಯುಕ್ತ ಎಂ.ಬಿ.ಬೋರಲಿಂಗಯ್ಯ, ವಿಧಾನಸಭೆಯ ಕಾರ್ಯದರ್ಶಿ ಎಂ.ವಿಶಾಲಾಕ್ಷಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

‘ಸದನದಲ್ಲಿ ನಾನು ಭಾಗವಹಿಸುವುದಿಲ್ಲ ಎಂಬ ಮಾತುಗಳನ್ನು ನಾನು ಒಪ್ಪುವುದಿಲ್ಲ. ಸಂಸದೀಯ ಪಾವಿತ್ರ್ಯತೆ ಕಾಪಾಡಲು ಎಲ್ಲ ಜನಪ್ರತಿನಿಧಿಗಳು ಸಹಕರಿಸಬೇಕು. ಜನರ ಅಪೇಕ್ಷೆಯಂತೆ ಉತ್ತಮ ರೀತಿಯಲ್ಲಿ ಅಧಿವೇಶನ ನಡೆಸುವ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮನ್ನು ನಾವು ಭಾವನಾತ್ಮಕವಾಗಿ ತೊಡಗಿಸಿಕೊಳ್ಳಬೇಕಿದೆ. ಆದುದರಿಂದ, ಎಲ್ಲರೂ ಸಹಕರಿಸಬೇಕು’

-ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪೀಕರ್

share
Next Story
X