Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿ.14ರಂದು 114 ‘ನಮ್ಮ ಕ್ಲಿನಿಕ್'ಗಳ...

ಡಿ.14ರಂದು 114 ‘ನಮ್ಮ ಕ್ಲಿನಿಕ್'ಗಳ ಉದ್ಘಾಟನೆ: ಸಚಿವ ಡಾ.ಕೆ.ಸುಧಾಕರ್

12 Dec 2022 7:52 PM IST
share
ಡಿ.14ರಂದು 114 ‘ನಮ್ಮ ಕ್ಲಿನಿಕ್ಗಳ ಉದ್ಘಾಟನೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಡಿ.12: ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ 114 ‘ನಮ್ಮ ಕ್ಲಿನಿಕ್’ಗಳು ಡಿ.14ರ ಬೆಳಗ್ಗೆ 11 ಗಂಟೆಗೆ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಲೋಕಾರ್ಪಣೆಯಾಗಲಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸೋಮವಾರ ನಗರದ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್‍ಗಳು ಏಕ ಕಾಲಕ್ಕೆ, ಏಕ ಸಮಯದಲ್ಲಿ ಲೋಕಾರ್ಪಣೆಯಾಗಲಿವೆ. ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸಲು ಸರಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 243 ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈ ಪೈಕಿ 150 ಕ್ಲಿನಿಕ್‍ಗಳನ್ನು ಜನವರಿ ಮೊದಲ ಅಥವಾ ಎರಡನೆ ವಾರದಲ್ಲಿ ಚಾಲನೆ ನೀಡಲಾಗುವುದು. ಈ ಕ್ಲಿನಿಕ್‍ಗಳಿಂದ ದುರ್ಬಲ ವರ್ಗದವರಿಗೆ, ಶ್ರಮಿಕರಿಗೆ, ಕೂಲಿ ಕಾರ್ಮಿಕರಿಗೆ ಸೇರಿದಂತೆ ಹಲವರಿಗೆ ಆರೋಗ್ಯ ಸೇವೆ ಸಿಗಲಿದೆ. 10 ರಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್‍ಗಳು ಆರಂಭವಾಗಲಿದೆ ಎಂದು ಸುಧಾಕರ್ ಹೇಳಿದರು.

ನಮ್ಮ ಕ್ಲಿನಿಕ್‍ಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯ ಇರಲಿದೆ.  ತಲಾ ಒಬ್ಬ ವೈದ್ಯಾಧಿಕಾರಿ,  ನಸಿರ್ಂಗ್ ಸ್ಟಾಫ್,  ಲ್ಯಾಬ್ ಟೆಕ್ನಿಷಿಯನ್,  ಡಿ ದರ್ಜೆ ನೌಕರರು ಇಲ್ಲಿ ಇರಲಿದ್ದಾರೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಶಿಶುವಿನ ಸಮಗ್ರ ಆರೈಕೆ, ಬಾಲ್ಯ ಮತ್ತು ಹದಿಹರಯದವರಿಗೆ ಸೇವೆಗಳು, ಸಾರ್ವತ್ರಿಕ ಲಸಿಕಾಕರಣದ ಸೇವೆಗಳು ಲಭ್ಯವಿರಲಿವೆ ಎಂದು ಅವರು ತಿಳಿಸಿದರು.

ಅಲ್ಲದೆ, ಕುಟುಂಬ ಕಲ್ಯಾಣ ಗರ್ಭ ನಿರೋಧಕ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಕಾಯಿಲೆಗಳಿಗೆ ಸೇವೆ, ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ, ಸಕ್ಕರೆ ಕಾಯಿಲೆ, ದೀರ್ಘಾವಧಿ ಕಾಯಿಲೆಗಳು, ಬಾಯಿ, ಸ್ತನ ಮತ್ತು  ಗರ್ಭಕೋಶದ ಕ್ಯಾನ್ಸರ್,  ಬಾಯಿಯ ಆರೋಗ್ಯ ಸಮಸ್ಯೆಗಳು ಮತ್ತು ಸೇವೆಗಳು, ಕಣ್ಣಿನ ತಪಾಸಣೆ, ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಮೂಲಭೂತ ಸೇವೆಗಳು ಸೇರಿದಂತೆ ಬೇರೆ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳು ಇಲ್ಲಿ ಲಭ್ಯವಾಗಲಿದೆ ಎಂದು ಸುಧಾಕರ್ ಹೇಳಿದರು.

ವೃದ್ಧಾಪ್ಯ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಔಷಧಗಳು ಸಂಪೂರ್ಣ ಉಚಿತವಾಗಿರಲಿದೆ. 14 ಪ್ರಯೋಗ ಶಾಲಾ ಪರೀಕ್ಷೆಗಳು ಇಲ್ಲಿ ಲಭ್ಯವಿದ್ದು ಟೆಲಿ ಕನ್ಸಲ್ಟೇಷನ್ ಸರ್ವೀಸಸ್, ಕ್ಷೇಮ ಚಟುವಟಿಕೆಗಳು ಉಚಿತವಾಗಿವೆ.ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 9 ರಿಂದ ಸಂಜೆ 4.30ರ ತನಕ ಈ ಸೇವೆ ಲಭ್ಯವಿದ್ದು ರವಿವಾರ ರಜೆ ಇರಲಿದೆ ಎಂದು ಅವರು ತಿಳಿಸಿದರು.

ಬಡಾವಣೆಯ ವ್ಯಾಪ್ತಿಯಲ್ಲಿ ಈ ಕ್ಲಿನಿಕ್‍ಗಳು ತಲೆ ಎತ್ತುವುದರಿಂದ ಸುಲಭವಾಗಿ ಆರೋಗ್ಯ ಸೇವೆ ಸಿಗಲಿದೆ.  ಒಟ್ಟು 150 ಕೋಟಿ ರೂ. ಮೊತ್ತದ ಯೋಜನೆ ಇದಾಗಿದ್ದು ಬಹುತೇಕ ಕ್ಲಿನಿಕ್‍ಗಳು ಸರಕಾರಿ ಕಟ್ಟಡಗಳಲ್ಲೇ ಕಾರ್ಯ ಆರಂಭಿಸಲಿದೆ. ಈಗಾಗಲೇ 300 ವೈದ್ಯರ ನೇಮಕವಾಗಿದ್ದು, ಕೆಲವೆಡೆ ವೈದ್ಯರ ಕೊರತೆ ಇದೆ. ಅಂತಹ ಕಡೆ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ 80-100 ವೈದ್ಯರನ್ನು  ಅಲ್ಲಿಗೆ ನೇಮಿಸಲಾಗಿದೆ ಎಂದು ಸುಧಾಕರ್ ತಿಳಿಸಿದರು. 

ಎಲ್ಲಿ, ಎಷ್ಟು ಕ್ಲಿನಿಕ್‍ಗಳು?: ಬಾಗಲಕೋಟೆ 18, ಬಳ್ಳಾರಿ 11, ವಿಜಯನಗರ 6, ಬೆಳಗಾವಿ 21, ಬೆಂಗಳೂರು ಗ್ರಾಮಾಂತರ 9, ಬೀದರ್ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3,  ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ದಾವಣಗೆರೆ 1, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರ್ಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3,  ಬಿಬಿಎಂಪಿ ವ್ಯಾಪ್ತಿಯಲ್ಲಿ 243 ನಮ್ಮ ಕ್ಲಿನಿಕ್ ಗಳು ಆರಂಭವಾಗಲಿವೆ ಎಂದು ಸುಧಾಕರ್ ಮಾಹಿತಿ ನೀಡಿದರು.

share
Next Story
X