ಬೆಳ್ತಂಗಡಿ: ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಲ್ತಾಜೆ ಸಮೀಪ ಮೃತದೇಹವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಕೇಲ್ತಾಜೆ ಸಮೀಪ ರಬ್ಬರ್ ತೋಟದ ಚರಂಡಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಂಪೂರ್ಣವಾಗಿ ಕೊಳೆತು ಹೋಗಿದ್ದು ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕಟ್ಟಿಗೆ ಹಾಕಿ ಸುಟ್ಟ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.
Next Story