ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ದೂರು

ಮಂಗಳೂರು, ಡಿ.13: ಏಳನೇ ತರಗತಿ ವಿದ್ಯಾರ್ಥಿನಿಯೋರ್ವಳಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಜನಾಡಿ ನಿವಾಸಿ ಬಶೀರ್(28) ಎಂಬಾತ ಆರೋಪಿಯಾಗಿದ್ದಾನೆ. ತೆಂಗಿನಕಾಯಿ ಕೀಳುವ ಕೆಲಸ ಮಾಡುವ ಈತ ಬಾಲಕಿಯ ಮನೆಮಂದಿಗೆ ಪರಿಚಿತನಾಗಿದ್ದ. ರವಿವಾರ ಮಧ್ಯಾಹ್ನ ಮನೆಯಲ್ಲಿ ಬಾಲಕಿ ಒಂಟಿಯಾಗಿದ್ದ ಸಂದರ್ಭ ತೆಂಗಿನಕಾಯಿ ಕೀಳಲೆಂದು ಈತ ಬಂದಿದ್ದ. ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು ಆಕೆಯ ಕೈ ಹಿಡಿದು ಹೊರಗೆ ಎಳೆದಿದ್ದಾನೆ ಎನ್ನಲಾಗಿದೆ. ಕೂಡಲೇ ಬಾಲಕಿ ಕಿರುಚಾಡಲು ಆರಂಭಿಸಿದ್ದು, ಮಾಹಿತಿ ಪಡೆದ ಸ್ಥಳೀಯರು ಮನೆಯತ್ತ ಆಗಮಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story