ಮಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಗೆ ಲೋಕಾಯುಕ್ತ ದಾಳಿ
ಬುಧವಾರವೂ ತಪಾಸಣೆ ಮುಂದುವರಿಕೆ

ಬುಧವಾರವೂ ತಪಾಸಣೆ ಮುಂದುವರಿಕೆ
ಮಂಗಳೂರು, ಡಿ.13: ನಗರ ಹೊರವಲಯದ ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಗೆ ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ವಿಭಾಗದಿಂದ ಇತ್ತೀಚೆಗೆ ನಡೆಸಲಾಗಿದ್ದ ಫೋನ್-ಇನ್ ಕಾರ್ಯಕ್ರಮದಲ್ಲಿ ಪರವಾನಿಗೆ ನೀಡಿಕೆಗೆ ಲಂಚದ ಬೇಡಿಕೆ, ಕೈಗಾರಿಕೆಗಳ ಮಾಲಿನ್ಯ ತಪಾಸಣೆಯಲ್ಲಿ ಲೋಪ ಇತ್ಯಾದಿಗಳ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿತ್ತು. ಆ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದ್ದು, ಬುಧವಾರವೂ ತಪಾಸಣೆ ಮುಂದುವರಿಯಲಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.
Next Story