ಬ್ರಹ್ಮಾವರ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ

ಬ್ರಹ್ಮಾವರ, ಡಿ.13: ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ತರಬೇತಿ ನೀಡಿದ ಬ್ರಹ್ಮಾವರ ಭಾಗದ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ‘ಕಿಶೋರ ಯಕ್ಷಗಾನ ಸಂಭ್ರಮ-2022’ ಮಂಗಳವಾರ ಸಂಜೆ ಬ್ರಹ್ಮಾವರದ ಬಂಟರ ಭವನದಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮವನ್ನು ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಯಕ್ಷ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷರಾದ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ತಿಮ್ಮಪ್ಪ ಹೆಗ್ಡೆ, ಬಂಟರ ಯಾನೆ ನಾಡವರ ಮಾತೃ ಸಂಘ ಉಡುಪಿ ತಾಲೂಕು ಸಮಿತಿ ಸದಸ್ಯ ಬಿ.ಭುಜಂಗ ಶೆಟ್ಟಿ, ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್ ಕೆ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ ಗಂಗಾಧರ ರಾವ್, ಉದ್ಯಮಿಗಳಾದ ಕರುಣಾಕರ ಹೆಗ್ಡೆ, ರಾಜಾರಾಮ್ ಶೆಟ್ಟಿ, ಹಿರಿಯರಾದ ಭಾಸ್ಕರ ರೈ, ಯಕ್ಷ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಮುರಳಿ ಕಡೆಕಾರ್, ಬ್ರಹ್ಮಾವರ ಪ್ರದರ್ಶನ ಸಂಘಟನಾ ಸಮಿತಿ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಸುಧೀರ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಕಮಲಾಕ್ಷ್ ಹೆಬ್ಬಾರ್ ಉಪಸ್ಥಿತರಿದ್ದರು.
ಚೇರ್ಕಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಇಂದು ಬ್ರಹ್ಮಾವರದ ನಿರ್ಮಲಾ ಪ್ರೌಢ ಶಾಲೆಯ ವಿದ್ಯಾರ್ಥಿಗಳು ‘ಕಾಳಿಂದಿ ವಿವಾಹ’ ಹಾಗೂ ಮಟಪಾಡಿ ಶ್ರೀನಿಕೇತನ ಪ್ರೌಢ ಶಾಲೆಯ ಮಕ್ಕಳು ‘ಶ್ರೀಕೃಷ್ಣ ಪಾರಿಜಾತ’ ಪ್ರಸಂಗಗಳನ್ನು ಆಡಿ ತೋರಿಸಿದರು.
ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ ಬ್ರಹ್ಮಾವರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರು ಆಯೋಜಿಸಿರುವ ಕಿಶೋರ ಯಕ್ಷಗಾನ ಸಂಭ್ರಮ ಇಂದಿನಿಂದ ಡಿ.20ರವರೆಗೆ ನಡೆಯಲಿದೆ. ಪ್ರತಿದಿನ ಸಂಜೆ ೫:೩೦ರಿಂದ ೮:೩೦ರವರೆಗೆ ದಿನಕ್ಕೆ ೨ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನ ನೀಡಲಿದ್ದಾರೆ. ಒಟ್ಟು ೧೫ ಶಾಲಾ ತಂಡಗಳು ಇಲ್ಲಿ ಪ್ರದರ್ಶನ ನೀಡಲಿವೆ.








