Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.15ರಂದು ಮೂಡುಬೆಳ್ಳೆ ಲಯನ್ಸ್ ಕ್ಲಬ್‌ನ...

ಡಿ.15ರಂದು ಮೂಡುಬೆಳ್ಳೆ ಲಯನ್ಸ್ ಕ್ಲಬ್‌ನ ಬೆಳ್ಳಿಹಬ್ಬದ ಸಂಭ್ರಮ

13 Dec 2022 9:50 PM IST
share
ಡಿ.15ರಂದು ಮೂಡುಬೆಳ್ಳೆ ಲಯನ್ಸ್ ಕ್ಲಬ್‌ನ ಬೆಳ್ಳಿಹಬ್ಬದ ಸಂಭ್ರಮ

ಉಡುಪಿ, ಡಿ.13: ಮೂಡುಬೆಳ್ಳೆ ಲಯನ್ಸ್ ಕ್ಲಬ್ ಇದೇ ಡಿ.15ರಂದು  ಬೆಳ್ಳಿಹಬ್ಬದ ಸಂಭ್ರಮವನ್ನು ಆಚರಿಸಲಿದೆ ಎಂದು ಕ್ಲಬ್‌ನ ಅಧ್ಯಕ್ಷ ನಿವೃತ್ತ ನೌಕಾದಳದ ಅಧಿಕಾರಿ ಕಮಡೋರ್ ಕಸ್ತಲಿನೋ ತಿಳಿಸಿದ್ದಾರೆ. 

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1997 ಡಿ.15ರಂದು ಪ್ರಾರಂಭಗೊಂಡ ಮೂಡುಬೆಳ್ಳೆ ಲಯನ್ಸ್ ಕ್ಲಬ್, 2002ರಲ್ಲಿ 20 ಸೆಂಟ್ಸ್‌ನ ಸ್ವಂತ ಸ್ಥಳದಲ್ಲಿ ಲಯನ್ಸ್ ಸೇವಾ ಭವನವನ್ನು ನಿರ್ಮಿಸಿದ್ದು ಊರಿನ ಸಮಾಜದ ವಿವಿಧ ಚಟುವಟಿಕೆಗಳಿಗೆ ನೀಡುತ್ತಿದೆ ಎಂದರು.

25 ವರ್ಷಗಳ ಸೇವಾ ವಿವರಗಳನ್ನು ನೀಡಿದ ಕ್ಲಬ್‌ನ ಕಾರ್ಯದರ್ಶಿ ದೇವದಾಸ ಹೆಬ್ಬಾರ್, ಆರೋಗ್ಯ ಸಂಬಂಧಿಸಿದಂತೆ ಉಚಿತ ದಂತ ಚಿಕಿತ್ಸಾ ಶಿಬಿರಗಳು, ಉಚಿತ ನೇತ್ರ ಚಿಕಿತ್ಸ ಶಿಬಿರಗಳು, ವೈದ್ಯಕೀಯ ಶಿಬಿರಗಳು, ರಕ್ತದಾನ ಶಿಬಿರಗಳನ್ನು ಆಯೋಜಿಸಿದೆ. ಡಾ.ಬಿ.ಎಂ.ಹೆಗ್ಡೆ ಕೊಡಮಾಡಿದ ಆರು ಲಕ್ಷರೂ.ಗಳಲ್ಲಿ ಮೂಡುಬೆಳ್ಳೆ ಪರಿಸರದ 120 ಬಡಕುಟುಂಬಗಳಿಗೆ ಉಚಿತ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದರು.

ಬೆಳ್ಳೆ ಸುತ್ತಮುತ್ತ ಮನೆ ಇಲ್ಲದವರಿಗೆ 14 ಮನೆಗಳನ್ನು ಲಯನ್ಸ್ ಕ್ಲಬ್  ನಿರ್ಮಿಸಿದೆ. ಹಲವು ಮನೆಗಳ ದುರಸ್ತಿ ಮಾಡಿಕೊಟ್ಟಿದೆ. 10 ಬಸ್ಸು ತಂಗುದಾಣ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ, ಶಾಲಾ ಬಿಸಿಯೂಟದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಮಳೆನೀರು ಕೊಯ್ಲು ಮುಂತಾದ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಬೆಳ್ಳಿಹಬ್ಬದ ಸಂದರ್ಭದಲ್ಲಿ ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ 40 ಸೀಟುಗಳ ಶಾಲಾ ವಾಹನವೊಂದನ್ನು ಸಂತ ಲಾರೆನ್ಸ್ ಕನ್ನಡ ಶಾಲೆಗೆ ನೀಡುತಿದ್ದೇವೆ ಎಂದರು.

ಬೆಳ್ಳಿಹಬ್ಬದ ಕಾರ್ಯಕ್ರಮಗಳು ಡಿ.15ರ ಗುರುವಾರ ಸಂಜೆ 5:45ಕ್ಕೆ ಲಯನ್ಸ್ ಸೇವಾ ಭವನದಲ್ಲಿ ನಡೆಯಲಿದೆ. ಇದರಲ್ಲಿ ಲಯನ್ಸ್ ಜಿಲ್ಲೆ 1317ಸಿಯ ಗವರ್ನರ್ ಡಾ.ಎಂ.ಕೆ.ಭಟ್, ಉಡುಪಿ ಧರ್ಮಪ್ರಾಂತದ ಬಿಷಪ್ ಅ.ವಂ.ಜೆರಾಲ್ಡ್ ಐಸಾಕ್ ಲೋಬೊ, ಅಮೆರಿಕ ಚಿಕಾಗೋದ ಆಸ್ಟಿನ್ ಡಿಸೋಜ, ಡಾ.ನೇರಿ ಕರ್ನೇಲಿಯೊ, ಮಹಮ್ಮದ್ ಹನೀಫ್ ಮುಂತಾದವರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕ್ಲಬ್‌ನ ಪ್ರಾಂತೀಯ ಅಧ್ಯಕ್ಷ ಎಲಿಯಾಸ್ ಡಿಸೋಜ, ಡಾ.ಎಗ್ವಿನ್ ಡಿಸೋಜ ಉಪಸ್ಥಿತರಿದ್ದರು.

share
Next Story
X