Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಗ್ಲೋಬಲ್ ಕರ್ನಾಟಕ ಬೆಟರ್...

‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ'ಕ್ಕಾಗಿ ಸಲಹೆ ನೀಡಿ: ಅನಿವಾಸಿ ಕನ್ನಡಿಗರಲ್ಲಿ ಡಿ.ಕೆ.ಶಿವಕುಮಾರ್ ಮನವಿ

13 Dec 2022 10:00 PM IST
share
‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕಕ್ಕಾಗಿ ಸಲಹೆ ನೀಡಿ: ಅನಿವಾಸಿ ಕನ್ನಡಿಗರಲ್ಲಿ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು, ಡಿ.13: ಅನಿವಾಸಿ ಕನ್ನಡಿಗರಿಂದ ಪಕ್ಷದ ಪ್ರಣಾಳಿಕೆ ‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ'ಕ್ಕಾಗಿ ಸಲಹೆಗಳನ್ನು ಆಹ್ವಾನಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ಕುರಿತಾದ ವಿಡಿಯೋವನ್ನು ಮಂಗಳವಾರ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸಿದ್ದಾರೆ.

‘ಜಾಗತಿಕ ಮಟ್ಟದಲ್ಲಿ ಕನ್ನಡಿಗರು ಸೇವೆ ಸಲ್ಲಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ವಿಶ್ವದ ಅನೇಕ ನಾಯಕರು ಬೆಂಗಳೂರು ಮತ್ತು ಕರ್ನಾಟಕದ ಮುಖಾಂತರ ಭಾರತವನ್ನು ಗುರುತಿಸುತ್ತಿದ್ದಾರೆ. ಆದರೆ ಇವತ್ತು ಕರ್ನಾಟಕಕ್ಕೆ ಒಂದು ಕಳಂಕ ಕೂಡ ಬಂದಿದೆ. ಅದನ್ನು ತಪ್ಪಿಸಿ ನಮ್ಮ ರಾಜ್ಯ ಹಾಗೂ ಅಸ್ತಿತ್ವದ ಘನತೆಯನ್ನು ಕಾಪಾಡಬೇಕಿದೆ’ ಎಂದು ಅನಿವಾಸಿ ಭಾರತೀಯರಿಗೆ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

‘ರಾಜ್ಯದ ಒಳಿತಿಗಾಗಿ ಹಾಗೂ ಉತ್ತಮ ಆಡಳಿತಕ್ಕಾಗಿ ಅನಿವಾಸಿ ಕನ್ನಡಿಗರು ಸಲಹೆ ನೀಡಬೇಕು. ಗ್ಲೋಬಲ್ ಕರ್ನಾಟಕ, ಬೆಟರ್ ಕರ್ನಾಟಕಕ್ಕಾಗಿ ನಿಮ್ಮ ಸಲಹೆ-ಸೂಚನೆಗಳನ್ನು ನೀಡಬೇಕು’ ಎಂದು ವಿನಂತಿಸಿಕೊಂಡಿರುವ ಅವರು, ರಾಜ್ಯವು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಅಭಿಪ್ರಾಯ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಕುರಿತು ಸಲಹೆ ಸೂಚನೆಯ ಜೊತೆಗೆ ರಾಜ್ಯದಲ್ಲಿ ಅಳವಡಿಸಬೇಕಿರುವ ವಿಷಯಗಳ ಕುರಿತು ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಜಗತ್ತಿನಾದ್ಯಂತ ನೆಲೆಸಿರುವ ಕನ್ನಡಿಗರಲ್ಲಿ ಕೇಳಿಕೊಂಡಿದ್ದಾರೆ. 

ಡಾ.ಜಿ.ಪರಮೇಶ್ವರ್ ಪ್ರಣಾಳಿಕಾ ಸಮಿತಿಯ ಅಧ್ಯಕ್ಷರಾಗಿದ್ದು, ಪ್ರಣಾಳಿಕೆಯ ಕರಡನ್ನು ಅಂತಿಮಗೊಳಿಸಲಿದ್ದಾರೆ. ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿರುವ ನನಗೆ ಪ್ರತಿಯೊಂದು ವಿಷಯಕ್ಕೆ ಸಂಬಂಧಿಸಿದಂತೆ ನಿಮ್ಮೆಲ್ಲರ ಸಹಕಾರ, ಸಲಹೆ ಸೂಚನೆಗಳ ಅಗತ್ಯವಿದೆ. ಕರ್ನಾಟಕದ ಅಭಿವೃದ್ಧಿಗಾಗಿ ನಿಮ್ಮ ಸಲಹೆಗಳನ್ನು ಆಹ್ವಾನಿಸುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದ್ದಾರೆ. 

ಪ್ರಣಾಳಿಕೆಗಾಗಿ ಜನರು ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಳ್ಳಲು made karnataka proud@gmail.com ಇಮೇಲ್ ಐಡಿಯನ್ನು ಬಿಡುಗಡೆಗೊಳಿಸಿದ್ದು, ಮುಕ್ತವಾಗಿ ಇದರಲ್ಲಿ ತೊಡಗಿಸಿಕೊಳ್ಳಲು ಜನರಿಗೆ ಕರೆ ನೀಡಿದ್ದಾರೆ. ‘ನಮ್ಮ ಗ್ಲೋಬಲ್ ವಿಶನ್ ಕರ್ನಾಟಕ, ಬೆಟರ್ ಕರ್ನಾಟಕಕ್ಕಾಗಿ, ಮುಂದಿನ ಭವಿಷ್ಯಕ್ಕೋಸ್ಕರ ನಿಮ್ಮ ಸಲಹೆಯನ್ನು ನಮ್ಮ ಪ್ರಣಾಳಿಕೆಯಲ್ಲಿ ಸೇರಿಸಲಿದ್ದೇವೆ’ ಎಂದು ಶಿವಕುಮಾರ್ ತಿಳಿಸಿದ್ದಾರೆ. 

ಸಲಹೆ-ಸೂಚನೆಗಳನ್ನು ವಿಡಿಯೋ, ಟೆಕ್ಸ್ಟ್ ಮೆಸೇಜ್ ಹಾಗೂ ವಿವರವಾದ ವರದಿಗಳ ಮೂಲಕ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡು ತಮ್ಮನ್ನು ಟ್ಯಾಗ್ ಮಾಡುವಂತೆ ಹೇಳಿರುವ ಶಿವಕುಮಾರ್, ಈ ಮೂಲಕ ವೈಯಕ್ತಿಕವಾಗಿ ಜನರ ಸಲಹೆ-ಸೂಚನೆಗಳನ್ನು ಓದಿ, ಅಧ್ಯಯನ ಮಾಡಬಹುದು ಎಂದು ತಿಳಿಸಿದ್ದಾರೆ.

share
Next Story
X