ಶಕ್ತಿ ಸಂಗಮಕ್ಕೆ ದ.ಕ.ಜಿಲ್ಲೆಯಿಂದ 1500 ಕಾರ್ಯಕರ್ತರು: ಪ್ರತಾಪ್ ಸಿಂಹ ನಾಯಕ್

ಮಂಗಳೂರು: ಡಿ. 18ರಂದು ವಿವಿಧ ಪ್ರಕೋಷ್ಠಗಳ ರಾಜ್ಯ ಸಮಾವೇಶ 'ಶಕ್ತಿಸಂಗಮ'ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ರಾಜ್ಯ ಹಿರಿಯ ನಾಗರಿಕರ ಪ್ರಕೋಷ್ಠ ದ ರಾಜ್ಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ರಾಜ್ಯ ಬಿಜೆಪಿಯ 14ಪ್ರಕೋಷ್ಠಗಳ ರಾಜ್ಯ ಸಮಾವೇಶ ಶಕ್ತಿಸಂಗಮದಲ್ಲಿ ಮಂಡಲ, ಜಿಲ್ಲೆ ಹಾಗೂ ರಾಜ್ಯ ಸಮಿತಿಯ ಸಂಚಾ ಲಕರು,ಸಹ ಸಂಚಾಲಕರು ಜಿಲ್ಲಾ ಸಂಯೋಜಕರು, ಸಂಕುಲ ಪ್ರಮುಖರ ದಕ್ಷಿಣ ಕನ್ನಡ ಜಿಲ್ಲೆಯಿಂದ 1500 ಕ್ರೀಯಾ ಶೀಲ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಈ ಸಮಾವೇಶ ನಡೆಯಲಿದ್ದು, ಕೇಂದ್ರದ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರವರು ಉಪಸ್ಥಿತರಿರುತ್ತಾರೆ, ಸಮಾರೋಪವನ್ನು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಶ್ ನೆರವೇರಿಸಲಿದ್ದಾರೆ, ಸಮಾವೇಶದಲ್ಲಿ ಸಾಂಸ್ಕೃತಿಕ ಪ್ರಕೋಷ್ಠದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.
ರಾಜ್ಯ ದಲ್ಲಿ ಬಿಜೆಪಿ ಜನರಿಗೆ ನೀಡಿದ ಭರವಸೆ ಈಡೇರಿಸಿದೆ. ಆದುದರಿಂದ ಮತ್ತೊಂದು ಬಾರಿ ಜಯಗಳಿಸಿ ಅಧಿಕಾರ ಹಿಡಿಯಲಿದೆ. ಪ್ರತಿ ಬೂತ್ ಮಟ್ಟದಲ್ಲಿ ಸರ್ಕಾರದ ಯೋಜನೆ ತಲುಪಿದೆ ಎಂದು ಪ್ರತಾಪ್ ಸಿಂಹ ನಾಯಕ್ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಬಿಜೆಪಿ ಮುಖಂಡ ರಾದ ರವಿಶಂಕರ್ ಮಿಜಾರ್, ಜಗದೀಶ್ ಶೇಣವ, ಸಂದೇಶ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.