ಹೈಕೋರ್ಟ್, ಅಧೀನ ನ್ಯಾಯಾಲಯ, ಅಧಿಕಾರಿಗಳ 4ನೇ ಶನಿವಾರ ಸಾರ್ವತ್ರಿಕ ರಜೆ ರದ್ದುಗೊಳಿಸಿ ಸರಕಾರ ಆದೇಶ

ಬೆಂಗಳೂರು, ಡಿ.13: ರಾಜ್ಯದ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯಗಳು ಹಾಗೂ ಅದಕ್ಕೆ ಸಂಬಂಧಟಪ್ಟ ಅಧಿಕಾರಿಗಳಿಗೆ ಪ್ರತಿ ತಿಂಗಳ 4ನೆ ಶನಿವಾರದ ಸಾರ್ವತ್ರಿಕ ರಜೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿ ಆದೇಶಿಸಿದೆ.
ಹೈಕೋರ್ಟ್ ಹಾಗೂ ಎಲ್ಲ ಅಧೀನ ನ್ಯಾಯಾಲಯ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು, ಪ್ರಾಸಿಕ್ಯೂಟರ್ ಗಳು, ಸರಕಾರಿ ವಕೀಲರು ಹಾಗೂ ಸದರಿ ನ್ಯಾಯಾಲಯಗಳಲ್ಲಿನ ಪ್ರಕರಣಗಳಿಗೆ ಸಮನ್ವಯಿಸಲು ಹಾಗೂ ನ್ಯಾಯಾಲಯಗಳ ಪ್ರಕರಣಳಿಗೆ ಹಾಜರಾಗುವ ಸರಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ನಾಲ್ಕನೆ ಶನಿವಾರದ ರಜೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿ ಆದೇಶಿಸಿದೆ.
2019ರ ಜೂ.13ರಂದು ತಕ್ಷಣದಿಂದ ಜಾರಿಗೆ ಬರುವಂತೆ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯಗಳಿಗೆ ಪ್ರತಿ ತಿಂಗಳ ನಾಲ್ಕನೆ ಶನಿವಾರವನ್ನು ಸಹ ಸಾರ್ವತ್ರಿಕ ರಜೆ ಎಂದು ಘೋಷಿಸಲಾಗಿತ್ತು. ಈ ಅಧಿಸೂಚನೆಯನ್ನು ಮಾರ್ಪಡಿಸಿ, ನಾಲ್ಕನೆ ಶನಿವಾರದ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸಲಾಗಿದೆ.
Next Story





