Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸಲ್ಲ:...

ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸಲ್ಲ: ಭಾಜಪ ಮುಖಂಡರಿಗೆ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ

13 Dec 2022 11:22 PM IST
share
ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸಲ್ಲ: ಭಾಜಪ ಮುಖಂಡರಿಗೆ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ

ಕುಂದಾಪುರ: ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವುದನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.

ಹೆಮ್ಮಾಡಿಯ ಖಾಸಗಿ ಹೋಟೇಲ್‌ನಲ್ಲಿ ಡಿ.13ರ ಸಂಜೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಗಾಗಿ ಕೆಲಸ ಮಾಡುವ ಯಾರನ್ನೆ ಆಗಲಿ ಸ್ವಾಗತಿಸುತ್ತೇವೆ. ತಳಮಟ್ಟದ ಸಂಘಟನೆ ಇರುವ ಬಿಜೆಪಿಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ಗುಜರಾತ್ ಹಾಗೂ ಉತ್ತರಕಾಂಡ್ ರಾಜ್ಯದ ಚುನಾವಣಾ ಮಾದರಿಯಲ್ಲಿ ರಾಜ್ಯದಲ್ಲಿಯೂ ಬದಲಾವಣೆಯ ನಿರೀಕ್ಷೆಗಳು ಇದೆ. 3-4 ಬಾರಿ ಶಾಸಕರಾದವರು, ಹೊಸಬರಿಗೆ ಅವಕಾಶ ನೀಡುವ ಸ್ವಯಂ ತೀರ್ಮಾನ ಕೈಗೊಳ್ಳಬೇಕು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಹಿಂದುತ್ವ ಪರವಾದ ಅಲೆ ಪ್ರಬಲವಾಗಿರುವ ಕಾರಣದಿಂದಾಗಿ ಜಾತಿ ಸಮೀಕರಣಗಿಂತ, ಪಕ್ಷದ ತತ್ವ, ಸಿದ್ಧಾಂತ ಒಪ್ಪಿಕೊಳ್ಳುವ ಅಭ್ಯರ್ಥಿಗಳಿಗೆ ಅವಕಾಶ ದೊರಕುವ ಸಾಧ್ಯತೆಗಳನ್ನು ಅಲ್ಲಗಳಿಯುವಂತಿಲ್ಲ ಎಂದರು.

ಬೈಂದೂರು ಸೇರಿದಂತೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳು ಯಾರು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಆದರೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ನಮಗೆ ಆಗಿದೆ ಪಕ್ಷ ತಿರುಗಲು ಹೇಳಿದೆ ಎನ್ನುವ ಮೂಲಕ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಪಕ್ಷ ಇದನ್ನು ಗಂಭೀರವಾಗಿ ಪರಿಗಣಿಸಲಿದ್ದು, ಇಂತಹವರ ವಿರುದ್ಧ ನೋಟಿಸು ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕ್ಷೇತ್ರದ ಜನರಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪಕ್ಷದ ಶಾಸಕರಾಗಿರುವುದರಿಂದಾಗಿ ಅವರೇ ನಮ್ಮ ನಾಯಕರಾಗಿದ್ದಾರೆ. 243 ಬೂತ್‌ಗಳಲ್ಲೂ ಪಕ್ಷ ಸಶಕ್ತವಾಗಿ ಕೆಲಸ ಮಾಡುತ್ತಿದೆ.

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟನೆಯ ಅವಲೋಕನ ನಡೆಸಲಾಗಿದೆ. ಜಿಲ್ಲೆಯ ಎಲ್ಲ 5 ಕ್ಷೇತ್ರಗಳ ಶಾಸಕರು ಉತ್ತಮವಾಗಿದ್ದಾರೆ. ಸ್ಥಳಿಯಾಡಳಿತ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆಗಳಲ್ಲಿ ಪಕ್ಷಕ್ಕೆ ಬಹುಮತ ಇರುವುದರಿಂದ ಮುಂದಿನ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಗಳು ನಿಚ್ಚಳವಾಗಿ ಗೆಲುವು ಸಾಧಿಸಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹಗಲುಗನಸು ಕಾಣುವುದು ಬೇಡ ಎಂದರು.

ಮತದಾರರು ಉತ್ತರಿಸುತ್ತಾರೆ: ಮುತಾಲಿಕ್ ಗೆ ಕುಯಿಲಾಡಿ ಖಡಕ್‌ ನುಡಿ

ಬಿಜೆಪಿಯದು ಡೊಂಗಿ ಹಿಂದುತ್ವ ಎನ್ನುವ ಪ್ರಮೋದ್ ಮುತಾಲಿಕ್ ಅವರು ಚುನಾವಣೆಗೆ ಸ್ಪರ್ಧಿಸಿದಲ್ಲಿ, ಕಾರ್ಕಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಫಲಿತಾಂಶದಲ್ಲಿ ಉತ್ತರ ಕೊಡುತ್ತಾರೆ. ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿಯಾಗಿದ್ದು, ಸಂಘಟನೆ ಹಾಗೂ ಅಭಿವೃದ್ಧಿಯಲ್ಲಿ ಕಾರ್ಕಳವನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿ ಇರಿಸಿದ್ದಾರೆ. ಮುತಾಲಿಕ್ ಅವರ ಬಗ್ಗೆ ಗೌರವ ಇದೆ. ಇದು ಖಂಡಿತ ಅವರ ತೀರ್ಮಾನವಲ್ಲ; ಕೆಲ ವಿಘ್ನ ಸಂತೋಷಿಗಳು, ಗೊಂದಲ ಸೃಷ್ಟಿಸಲು ಅವರನ್ನು ಅಭ್ಯರ್ಥಿಯಾಗಿ ಬಿಂಬಿಸಲು ಹೊರಟಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜಡ್ಡು, ಕೋಶಾಧಿಕಾರಿ ಅಶೋಕ ಕುಮಾರ ಶೆಟ್ಟಿ ಸಂಸಾಡಿ, ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ದಾವೂದ್ ಇದ್ದರು.

share
Next Story
X