ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳ ನೋಂದಣಿ; ಆಫ್ ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು, ಡಿ.13: ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಯಾಗಿ ಭಾಗವಹಿಸುವವರಿಗೆ ಮತ್ತು ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳನ್ನು ಕಾಯ್ದಿರಿಸಲು https://bit.ly/3VlidZj ಮೂಲಕ ಆನ್‍ಲೈನ್ ನೋಂದಣಿ ಕಾರ್ಯ ಈಗಾಗಲೇ ಪ್ರಗತಿಯಲ್ಲಿದ್ದು, ಈಗ ಆಫ್‍ಲೈನ್‍ನಲ್ಲಿಯೂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಇಂಟರ್‍ನೆಟ್ ಸಮಸ್ಯೆ, ವಿದ್ಯುತ್ ಸಮಸ್ಯೆ ಹಾಗೂ ಕೆಲವರಿಗೆ ಆನ್ ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳುವುದಕ್ಕೆ ವ್ಯತ್ಯಯ ಆಗುತ್ತಿದೆ ಎಂದು ಸಾರ್ವಜನಿಕರು ತಿಳಿಸುತ್ತಿದ್ದು, ಕಸಾಪ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಕಚೇರಿಯಲ್ಲಿ ಆಫ್ ಲೈನ್ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಡಿ.25ರವರೆಗೆ ನೋಂದಣಿ ಕಲಾವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story





