ವಿಜಯಪುರ: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ
ವಿಜಯಪುರ, ಡಿ.14: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ವರದಿಯಾಗಿದೆ.
ಮೃತರನ್ನು ತಾಯಿ ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಎಂದು ಗುರುತಿಸಲಾಗಿದೆ.
ಗ್ರಾಮದ ಹೊರ ಭಾಗದಲ್ಲಿರುವ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಹೆಣ್ಣು ಮಗುವಿನ ಮೃತದೇಹಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.
ಈ ಸಂಬಂಧ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story