ಸಾಗರ | ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ; ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಮಹಮ್ಮದ್ ಅಯಾನ್ ಪ್ರಥಮ
ಸಾಗರ : ಭದ್ರಾವತಿಯಲ್ಲಿ ಮಂಗಳವಾರ ನಡೆದ 2022- 23ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಗರದ ಸಂತ ಜೋಸೆಫ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಮಹಮದ್ ಅಯಾನ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹಿಂದಿ ಕಂಠಪಾಠ ವಿಭಾಗದಲ್ಲಿ ಸ್ಪರ್ಧಿಸಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಹೆಮ್ಮೆಯ ಸಂಗತಿಯಾಗಿದೆ. ಈ ಮೂಲಕ ವಿದ್ಯಾರ್ಥಿ ಮಹಮ್ಮದ್ ಅಯಾನ್ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಲಿಡಿಯಾ ಡಿಸೋಜಾ ಹಾಗೂ ಶಿಕ್ಷಕ ವರ್ಗ ಅಭಿನಂಧಿಸಿದೆ.
Next Story