ಬಾಲಕಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಮೂವರು ಆರೋಪಿಗಳ ಬಂಧನ

ಹೊಸದಿಲ್ಲಿ, ಡಿ. 14: ಹೊಸದಿಲ್ಲಿಯ ಮೋಹನ್ ಗಾರ್ಡನ್(Mohan Garden)ನಲ್ಲಿ ಬುಧವಾರ ನಡೆದ 17 ವರ್ಷದ ಬಾಲಕಿಯ ಮೇಲಿನ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿ ತನ್ನ ಸಹೋದರಿಯೊಂದಿಗೆ ಮನೆಯಿಂದ ಶಾಲೆಗೆ ತೆರಳುತ್ತಿದ್ದಳು ಈ ಸಂದರ್ಭ ಬೈಕ್‌ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ಮಾದರಿಯ ರಾಸಾನಿಯಕ ದ್ರವವನ್ನು ಆಕೆಯ ಮೇಲೆ ಎರಚಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ (ದ್ವಾರ್ಕಾ) ಹರ್ಷ ವರ್ಧನ್(Harsha Vardhan) ತಿಳಿಸಿದ್ದಾರೆ. ದುಷ್ಕರ್ಮಿಗಳು ಬಾಲಕಿಯ ಮೇಲೆ ರಾಸಾಯನಿಕ ದ್ರವ ಎರಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
Next Story





