Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಳೆಯಿಂದ ಮತ್ತೆ ಗುಂಡಿ ಬಿದ್ದ...

ಮಳೆಯಿಂದ ಮತ್ತೆ ಗುಂಡಿ ಬಿದ್ದ ಸಿಲಿಕಾನ್‍ಸಿಟಿ ರಸ್ತೆಗಳು

14 Dec 2022 10:06 PM IST
share
ಮಳೆಯಿಂದ ಮತ್ತೆ ಗುಂಡಿ ಬಿದ್ದ ಸಿಲಿಕಾನ್‍ಸಿಟಿ ರಸ್ತೆಗಳು

ಬೆಂಗಳೂರು, ಡಿ. 14: ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ನಗರದ ರಸ್ತೆಗಳು ಹಾಳಾಗಿ ಗುಂಡಿಮಯವಾಗಿದ್ದು, ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಕಳೆದ ಕೆಲ ದಿನಗಳ ಹಿಂದೆ ನಗರದಲ್ಲಿ ಗುಂಡಿಬಿದ್ದ ರಸ್ತೆಗಳನ್ನು ಮುಚ್ಚಲಾಗಿತ್ತು. ಮತ್ತೆ ಗುಂಡಿಗಳ ಸಂಖ್ಯೆ ದ್ವಿಗುಣವಾಗುತ್ತಿದೆ. ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದ್ದು, ಪಾಲಿಕೆಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ. ನಾಗರಬಾವಿ ಮುಖ್ಯರಸ್ತೆ, ಆರ್‍ಟಿ ನಗರ, ಶಾಂತಿನಗರ, ವಿಲ್ಸನ್ ಗಾರ್ಡನ್, ಮಡಿವಾಳ, ತಿಲಕ್‍ನಗರ, ಜೆಸಿ ರಸ್ತೆ, ಹೆಬ್ಬಾಳ, ಉಲ್ಲಾಳ ಸೇರಿದಂತೆ ವಿವಿಧೆಡೆ ಮಳೆಯಿಂದ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ನೀರು ತುಂಬಿಕೊಂಡಿದೆ. ಕಳೆದ ತಿಂಗಳು ಬಿಬಿಎಂಪಿ ನಗರವನ್ನು ಗುಂಡಿಮುಕ್ತವನ್ನಾಗಿ ಮಾಡಲು ಕ್ರಮ ಕೈಗೊಂಡಿತ್ತು. ಆದರೆ, ಗುರಿ ಮುಟ್ಟುವಷ್ಟರಲ್ಲಿ ಮಳೆಯಿಂದ ಎಲ್ಲವೂ ವಿಫಲವಾಗಿದೆ.

ಮೇ ತಿಂಗಳಿನಿಂದ ಈವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಅಂದಾಜು 31,211 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದ್ದು, ಈವರೆಗೆ 24,957 ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ 6254 ಗುಂಡಿಗಳನ್ನು ಮುಚ್ಚಲಾಗುವುದು ಎಂದು ಪಾಲಿಕೆ ತಿಳಿಸಿದೆ. ಆದರೆ, ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ನಗರದ ರಸ್ತೆಗಳು ಗುಂಡಿಮಯವಾಗಿರುವುದು ಮತ್ತು ಕಳಪೆ ಕಾಮಗಾರಿ ಎದ್ದುಕಾಣುತ್ತಿದೆ.

ವಾಹನ ಸವಾರರು ಗುಂಡಿ ಬಗ್ಗೆ ಪ್ರತಿಕ್ರಿಯಿಸಿ, ಬಿಬಿಎಂಪಿ ದೊಡ್ಡ ದೊಡ್ಡ ಗುಂಡಿಗಳನ್ನಷ್ಟೇ ಮುಚ್ಚುತ್ತಿದೆ. ವಾರ್ಡ್ ರಸ್ತೆ ಹಾಗೂ ಗಲ್ಲಿ ರಸ್ತೆಗಳನ್ನು ಮುಚ್ಚುತ್ತಿಲ್ಲ. ಇದರಿಂದಲೂ ಸಹ ತೊಂದರೆಯಾಗುತ್ತಿದೆ. 

ಕೆಲವೆಡೆ ಜಲ್ಲಿ ಎಂ ಸ್ಯಾಂಡ್ ಹಾಕಿ ಕೆಲವು ದಿನಗಳೇ ಕಳೆದಿವೆ. ಡಾಂಬರು ಮಾತ್ರ ಹಾಕಿಲ್ಲ. ಇದರಿಂದ ಸ್ಕೂಟರ್‍ಗಳು ಸ್ಕಿಡ್ ಆಗಿ ತೊಂದರೆಯಾಗುತ್ತಿದೆ. ಜನರ ಕಣ್ಣೊರೆಸಲು ಕಳಪೆ ಕಾಮಗಾರಿ ಮಾಡಿ ಗುಂಡಿ ಮುಚ್ಚಲಾಗಿತ್ತು. ಈಗ ಮತ್ತೆ ಗುಂಡಿಗಳು ರಾರಾಜಿಸುತ್ತಿದ್ದು, ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

share
Next Story
X