Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.16ರಿಂದ ‘ಮಂಗಳೂರು ಟೆಕ್ನೋವಾಂಜಾ’...

ಡಿ.16ರಿಂದ ‘ಮಂಗಳೂರು ಟೆಕ್ನೋವಾಂಜಾ’ ಸಮಾವೇಶ: ಸಚಿವ ಡಾ. ಅಶ್ವತ್ಥನಾರಾಯಣ

14 Dec 2022 10:09 PM IST
share
ಡಿ.16ರಿಂದ ‘ಮಂಗಳೂರು ಟೆಕ್ನೋವಾಂಜಾ’ ಸಮಾವೇಶ: ಸಚಿವ ಡಾ. ಅಶ್ವತ್ಥನಾರಾಯಣ

ಮಂಗಳೂರು, ಡಿ.14: ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಲ್ಲಿ ಉದ್ಯಮಗಳು ನೆಲೆಯೂರುವಂತೆ ಮಾಡುವ ಉದ್ದೇಶದಿಂದ ರೂಪಿಸಿರುವ ‘ಬಿಯಾಂಡ್ ಬೆಂಗಳೂರು’ ಉಪಕ್ರಮದ ಭಾಗವಾಗಿ ಡಿ.16 ಮತ್ತು 17ರಂದು ಮಂಗಳೂರಿನ ಟಿ.ಎಂ.ಎ.ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ‘ಮಂಗಳೂರು ಟೆಕ್ನೋವಾಂಜಾ’ ಸಮಾವೇಶ ನಡೆಯಲಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬುಧವಾರ ಈ ಬಗ್ಗೆ ಮಾತನಾಡಿರುವ ಅವರು ಫಿನ್-ಟೆಕ್ ಉದ್ದಿಮೆಗಳ ತೊಟ್ಟಿಲಾಗಿ ಬೆಳೆಯುವ ಸಾಮರ್ಥ್ಯ ಹೊಂದಿರುವ ಮಂಗಳೂರಿನಲ್ಲಿ ಈ ಬಗೆಯ ಎರಡನೆಯ ಸಮಾವೇಶ ಇದಾಗಿದೆ. ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಇದನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಸಮಾವೇಶದ ಅಂಗವಾಗಿ ಆಯ್ದ ಸ್ಟಾರ್ಟಪ್‌ಗಳ ಮುಖ್ಯಸ್ಥರು ಮತ್ತು ಹೂಡಿಕೆದಾರರ ವಿಚಾರ ವಿನಿಮಯದ ಉದ್ದೇಶದಿಂದ ‘ಮಂಗಳೂರು ಬ್ಲೂ’, ಉದ್ದಿಮೆ, ಶಿಕ್ಷಣ ಮತ್ತು ಸಾಮಾಜಿಕ ವಲಯಗಳಲ್ಲಿ ಸಕ್ರಿಯವಾಗಿರುವ ಸಾಧಕ ಮಹಿಳೆಯರ ’ವಿಮೆನ್‌ವರ್ಕ್’, ರಾಜ್ಯದ ಪ್ರಮುಖ ಕಂಪನಿಗಳ ಸಿಇಒಗಳ ದುಂಡು ಮೇಜಿನ ಸಭೆ, ವಿದ್ಯಾರ್ಥಿಗಳು ಮತ್ತು ಉದ್ಯಮಗಳ ಬಗ್ಗೆ ಅರಿವು ಮೂಡಿಸಲು 5 ಕಿ.ಮೀ. ಉದ್ದದ ವಾಕಥಾನ್ ಮತ್ತು ಪರಿಣತರಿಂದ ವಿಚಾರ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭ ‘ಕ್ಯಾಶ್‌ಫ್ರೀ ಪೇಮೆಂಟ್ಸ್’ ಕಂಪನಿಯ ಮಂಗಳೂರು ಕಚೇರಿ ಮತ್ತು ಕ್ಲೌಡ್ ಕಂಪ್ಯೂಟಿಂಗ್ ಆಧಾರಿತ ‘ನೀವಿಯಸ್ ಸೊಲ್ಯೂಷನ್ಸ್’ ಕಂಪನಿಯ ಉಡುಪಿ ಕಚೇರಿಯನ್ನು ಉದ್ಘಾಟಿಸಲಾಗುವುದು. ಇವು ಸ್ಥಳೀಯರಿಗೆ ಅಪಾರ ಸಂಖ್ಯೆಯ ಉದ್ಯೋಗಗಳನ್ನು ಸೃಷ್ಟಿಸಲಿದ್ದು, ಇವುಗಳಿಗೆ ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಅಗತ್ಯ ಸೌಲಭ್ಯಗಳ ನೆರವನ್ನು ಒದಗಿಸಲಾಗಿದೆ ಎಂದು ಸಚಿವ ಡಾ.ಸಿ ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಡಿಜಿಟಲ್ ಎಕಾನಮಿ ಮಿಷನ್ ಅಡಿಯಲ್ಲಿ ಮಂಗಳೂರು ಕ್ಲಸ್ಟ್ಟರ್ ಅಭಿವೃದ್ಧಿಗೆ 25 ಕೋ. ರೂ.ಗಳ ಬೀಜನಿಧಿಯನ್ನು ಒದಗಿಸಲಾಗಿದೆ. ಇದಕ್ಕೆ ಪೂರಕವಾಗಿ ಮಂಗಳೂರಿನಲ್ಲಿ ಫಿನ್‌ಟೆಕ್ ಉತ್ಕೃಷ್ಟತಾ ಕೇಂದ್ರ ಮತ್ತು ಉಡುಪಿಯಲ್ಲಿ ಎವಿಜಿಸಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಸರಕಾರವು ಸಂಬಂಧಿಸಿದವರೊಂದಿಗೆ ಗಂಭೀರವಾಗಿ ಚರ್ಚಿಸುತ್ತಿದೆ. ಅಲ್ಲದೆ ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ಸ್ಥಾಪಿಸುವ ಸಂಬಂಧ ಕಿಯೋನಿಕ್ಸ್ ಜತೆ ಮಾತುಕತೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
ಬಿಯಾಂಡ್ ಬೆಂಗಳೂರು ಉಪಕ್ರಮದಿಂದಾಗಿ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ-ಬೆಳಗಾವಿ ಕ್ಲಸ್ಟರ್‌ಗಳಲ್ಲಿ ಈಗಾಗಲೇ 24 ಕಂಪನಿಗಳು ಕಾರ್ಯಾರಂಭ ಮಾಡಿವೆ. ಇದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಇಂಬು ನೀಡುವ ಬೆಳವಣಿಗೆಯಾಗಿದ್ದು, 2026ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್‌ಗಳಷ್ಟು ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.
‘ಮಂಗಳೂರು ಟೆಕ್ನೋವಾಂಜಾ’ದಲ್ಲಿ ಸಚಿವ ಎಸ್.ಅಂಗಾರ, ಹರ್ಷಿಲ್ ಮಾಥೂರ್, ಆಕಾಶ್ ಸಿನ್ಹಾ, ರವೀಶ್ ನರೇಶ್, ನಿಖಿಲ್ ಕಾಮತ್ ಸಹಿತ 30ಕ್ಕೂ ಹೆಚ್ಚು ಉದ್ಯಮಿಗಳು, ಕರ್ನಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಭಟ್, ಭಾರತೀಯ ಸ್ಟೇಟ್‌ಬ್ಯಾಂಕ್‌ನ ಚೀಫ್ ಜನರಲ್ ಮ್ಯಾನೇಜರ್ ನಂದಕಿಶೋರ್, ಮಣಿಪಾಲ್ ಅಕಾಡಮಿ ಆಫ್ ಹೈಯರ್ ಎಜುಕೇಷನ್‌ನ ಸಿಐಒ ಮುಹಮದ್ ಜುಬೇರ್‌‌, ಕೆನರಾ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಗಣೇಶ್ ಕಾಮತ್, ಎಸ್‌ಟಿಪಿಐ ನಿರ್ದೇಶಕ ರವೀಂದ್ರ ಆರೂರ್ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ. 

share
Next Story
X