Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾರಿ ತಪ್ಪಿಸುವ ಪತಂಜಲಿ ಜಾಹೀರಾತು...

ದಾರಿ ತಪ್ಪಿಸುವ ಪತಂಜಲಿ ಜಾಹೀರಾತು ಪ್ರಕಟಿಸಿದ್ದ ಎರಡು ಮಾಧ್ಯಮ ಸಂಸ್ಥೆಗಳಿಗೆ ಪಿಸಿಐ ನೋಟಿಸ್

14 Dec 2022 10:29 PM IST
share
ದಾರಿ ತಪ್ಪಿಸುವ ಪತಂಜಲಿ ಜಾಹೀರಾತು ಪ್ರಕಟಿಸಿದ್ದ ಎರಡು ಮಾಧ್ಯಮ ಸಂಸ್ಥೆಗಳಿಗೆ ಪಿಸಿಐ ನೋಟಿಸ್

ಹೊಸದಿಲ್ಲಿ,ಡಿ.14: ಮಧುಮೇಹ,ರಕ್ತದೊತ್ತಡ  ಮತ್ತು ಇತರ ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಹೇಳಿಕೊಂಡು ಬಾಬಾ ರಾಮದೇವ್(Baba Ramdev) ಅವರ ಪತಂಜಲಿ ಗ್ರೂಪ್ (Patanjali Group) ಬಿಡುಗಡೆಗೊಳಿಸಿದ್ದ ದಾರಿ ತಪ್ಪಿಸುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಎರಡು ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಿಗೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (PCI) ಶೋಕಾಸ್ ನೋಟಿಸ್‌ಗಳನ್ನು ಜಾರಿಗೊಳಿಸಿದೆ.

ಕೇರಳದ ಆರ್‌ಟಿಐ ಕಾರ್ಯಕರ್ತ ಹಾಗೂ ನೇತ್ರತಜ್ಞ ಡಾ.ಕೆ.ವಿ.ಬಾಬು(Dr. KV Babu) ಅವರು ಸಲ್ಲಿಸಿದ್ದ ದೂರುಗಳ ಮೇರೆಗೆ ಪಿಸಿಐ ಈ ನೋಟಿಸ್‌ಗಳನ್ನು ಹೊರಡಿಸಿದೆ. ಒಂದು ರಾಷ್ಟ್ರಮಟ್ಟದ ಮಾಧ್ಯಮ ಸಂಸ್ಥೆಯಾಗಿದ್ದರೆ ಇನ್ನೊಂದು ಪ್ರಾದೇಶಿಕ ಮಾಧ್ಯಮ ಸಂಸ್ಥೆಯಾಗಿದೆ. ಜಾಹೀರಾತುಗಳು ಡ್ರಗ್ಸ್ ಆ್ಯಂಡ್ ಮ್ಯಾಜಿಕ್ ರೆಮೆಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯನ್ನು ಉಲ್ಲಂಘಿಸಿವೆ ಎಂದು ಡಾ.ಬಾಬು ಆರೋಪಿಸಿದ್ದರು.

ಪತಂಜಲಿ ಗ್ರೂಪ್‌ನ ಮಾರಾಟ ಘಟಕ ದಿವ್ಯಾ ಫಾರ್ಮಸಿ ಈ ಜಾಹೀರಾತುಗಳನ್ನು ಬಿಡುಗಡೆಗೊಳಿಸಿತ್ತು. ಪಿಸಿಐ ಕ್ರಮ ಕೈಗೊಳ್ಳುವ ಮೊದಲೇ ಉತ್ತರಾಖಂಡ ರಾಜ್ಯ ಔಷಧಿ ನಿಯಂತ್ರಕರು ಮತ್ತು ಕೇಂದ್ರ ಸರಕಾರದ ಅಧಿಕಾರಿಗಳು ಕಾಯ್ದೆಯ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿದ್ದರು.

ಜಾಹೀರಾತುಗಳನ್ನು ಪ್ರಕಟಿಸಿದ್ದು 2020ರ ಪತ್ರಿಕೋದ್ಯಮ ನಡವಳಿಕೆ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ರೋಗಿಗಳ ಮತ್ತು ಸಾರ್ವಜನಿಕ ಆರೋಗ್ಯದ ಹಿತಾಸಕ್ತಿಗೆ ವಿರುದ್ಧವಾಗಿದೆ. ಪಿಸಿಐ ಎರಡು ದೈನಿಕಗಳ ಸಂಪಾದಕರಿಗೆ ನೋಟಿಸ್ ಜಾರಿಗೊಳಿಸಿದ್ದನ್ನು ತಾನು ಸ್ವಾಗತಿಸುತ್ತೇನೆ ಎಂದು ಡಾ.ಬಾಬು ಸುದ್ದಿಸಂಸ್ಥೆಗೆ ತಿಳಿಸಿದರು.

ನೋಟಿಸ್‌ಗೆ ಉತ್ತರಿಸಲು ಮಾಧ್ಯಮ ಸಂಸ್ಥೆಗಳಿಗೆ ಎರಡು ವಾರಗಳ ಗಡುವು ನೀಡಲಾಗಿದೆ. ದಿವ್ಯಾ ಲಿಪಿಡಮ್,ದಿವ್ಯಾ ಲಿವೊಗ್ರಿಟ್, ದಿವ್ಯಾ ಲಿವಾಮೃತ ಅಡ್ವಾನ್ಸ್,ದಿವ್ಯಾ ಮಧುನಾಶಿನಿ ವಟಿ ಮತ್ತು ದಿವ್ಯಾ ಮಧುನಾಶಿನಿ ಮಾತ್ರೆಗಳು ಹೃದ್ರೋಗಗಳು ಮತ್ತು ಇತರ ಕಾಯಿಲೆಗಳನ್ನು ಗುಣಪಡಿಸುತ್ತವೆ ಎಂದು ದಿವ್ಯಾ ಫಾರ್ಮಸಿ ಜಾಹೀರಾತುಗಳಲ್ಲಿ ಹೇಳಿಕೊಂಡಿತ್ತು.

share
Next Story
X