ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಮಂಗಳೂರು, ಡಿ.14: ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.
ಹುದ್ದೆಯ ಅರ್ಹತೆಯ ವಿವರ ಹೀಗಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್‌ಎಂ ಹಾಗೂ ಪಿಬಿಬಿಎಸ್ಸಿ ನರ್ಸಿಂಗ್‌ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹಾಗೂ ಐಇಎಲ್‌ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.
ಆಸಕ್ತರು ಕಚೇರಿ ದಿನಗಳಲ್ಲಿ (2ನೇ ಹಾಗೂ 4ನೇ ಶನಿವಾರ, ರವಿವಾರ ಹಾಗೂ ಇತರ ಸರಕಾರಿ ರಜೆಗಳನ್ನು ಹೊರತುಪಡಿಸಿ) ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಮಾಹಿತಿಗೆ ಎಚ್.ಆರ್. ಕೋರ್ಡಿನೇಟರ್ (ಎಚ್.ಆರ್.ಕೋ.ಆರ್ಡಿನೇಟರ್)ರ ಮೊ.ಸಂ: 9110248485ನ್ನು ಸಂಪರ್ಕಿಸಬಹುದು ಎಂದು ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







